ಯಲ್ಲಾಪುರ: ತಾಲೂಕಿನ ಅರಬೈಲ್ ಘಾಟ್ ನ ಯು ಟರ್ನ್ ಬಳಿ ಟ್ಯಾಂಕರ್ ಪಲ್ಟಿಯಾದ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ. ಹಾಲು ತುಂಬಿದ ತಮಿಳುನಾಡಿನ ಮೂಲದ ಟ್ಯಾಂಕರ್ ಬ್ರೇಕ್ ಫೇಲ್ ಆದ ಕಾರಣ ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿ ಆಗಿದೆ.
ಮಹಾರಾಷ್ಟ್ರದ ಕೊಲ್ಲಾಪುರದಿಂದ ಕೇರಳಕ್ಕೆ ಸಾಗುತ್ತಿದ್ದ ವೇಳೆಯಲ್ಲಿ ಈ ಘಟನೆ ಸಂಭವಿಸಿದ್ದು ಅಂದಾಜು ೨೦ ಸಾವಿರ ಲೀಟರ್ ಹಾಲು ಹೊಳೆಯಂತೆ ಹರಿದು ಪೋಲಾಗಿದೆ. ಈ ವೇಳೆ ಸುತ್ತಮುತ್ತಲಿನ ಜನ ಬಾಟಲಿ,ಬಕೆಟ್ ಡಬ್ಬಿಗಳನ್ನು ಹಿಡಿದು ಹಾಲನ್ನು ತುಂಬಿಸಿಕೊಳ್ಳಲು ಮುಗಿಬೀಳುತ್ತಿರುವ ದೃಶ್ಯ ಕಂಡುಬಂದಿತು.