ಯಲ್ಲಾಪುರ: ತಾಲೂಕಿನ ಇಡಗುಂದಿ ಸಮೀಪ ರಾಷ್ಟ್ರೀಯ ಹೆದ್ದಾರಿ 63 ರ ಮೇಲೆ ಘರವಾಸಕ್ರಾಸ್ ಬಳಿಯ ಇಳಿಜಾರಿನಲ್ಲಿ ಸರಕು ತುಂಬಿದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಗಟಾರದಲ್ಲಿ ಪಲ್ಟಿಯಾಗಿದೆ.
ಲಾರಿ ಜಖಂಗೊಂಡಿದ್ದು, ಚಾಲಕ, ನಿರ್ವಾಹಕ ಅಪಾಯದಿಂದ ಪಾರಾಗಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.