ಅಂಕೋಲಾ: ಕಪ್ಪೆ ಚಿಪ್ಪು ತೆಗೆಯಲು ತೆರಳಿದ್ದ ಓರ್ವ ವಿದ್ಯಾರ್ಥಿನಿ ಸೇರಿದಂತೆ ಮೂವರು ನದಿ ಪಾಲಾದ ದುರ್ಘಟನೆ ಸಂಭವಿಸಿದೆ. ಜಿಲ್ಲೆಯ ಅಂಕೋಲಾ ತಾಲೂಕಿನ ಕರಿಕಲ್ ಕಡಕಾರ ಬಳಿಯ ಗಂಗಾವಳಿ ನದಿಯಲ್ಲಿ ಈ ಘಟನೆ ನಡೆದಿದೆ.
ಕಡಕಾರ ನಿವಾಸಿ ಪೂಜಾ ಮಹೇಶ ನಾಯ್ಕ, ಕುಮಟಾ ಕೋನಳ್ಳಿ ನಿವಾಸಿ ದಿಲೀಪ ನಾಯ್ಕ, ಅಘನಾಶಿನಿ ನಿವಾಸಿ ನಾಗೇಂದ್ರ ನಾಯ್ಕ ಮೃತ ದುರ್ದೈವಿಗಳಾಗಿದ್ದಾರೆ. ಮೂವರ ಮೃತ ದೇಹ ಗಂಗಾವಳಿ ನದಿಯಲ್ಲಿ ಪತ್ತೆಯಾಗಿದ್ದು, ಘಟನಾ ಸ್ಥಳಕ್ಕೆ ಅಂಕೋಲಾ ಪೋಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.