ಕಾರವಾರ: ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‍ಸೆಟ್ ಸಂಸ್ಥೆ ವತಿಯಿಂದ ಕಂಪ್ಯೂಟರ್ ಹಾರ್ಡ್‍ವೇರ್ ಮತ್ತು ನೆಟ್ವರ್ಕಿಂಗ್, 10 ದಿನಗಳ ಹೈನುಗಾರಿಕೆ, ಎರೆಹುಳ ಗೊಬ್ಬರ ತಯಾರಿಕೆ ಮತ್ತು 30 ದಿನಗಳ ಕಂಪ್ಯೂಟರ್ ಟ್ಯಾಲಿ ಮತ್ತು ದ್ವಿ-ಚಕ್ರ ವಾಹನ ದುರಸ್ತಿ ಮಾಡುವ ಉಚಿತ ತರಬೇತಿಯನ್ನು ಹಮ್ಮಿಕೊಳ್ಳಲಾಗುತ್ತಿದೆ.
ತರಬೇತಿಯನ್ನು ಊಟ ವಸತಿಯೊಂದಿಗೆ ನೀಡಲಾಗುವುದು. 18ರಿಂದ 45ರ ವರ್ಷದೊಳಗಿನ ಆಸಕ್ತ ಯುವಕರು/ಯುವತಿಯರು ಏ.30ರೊಳಗೆ ಹೆಸರು ನೋಂದಾಯಿಸಿಕೊಳ್ಳಬೇಕು. ಮೊದಲು ಬಂದವರಿಗೆ, ಹಾಗೂ ಗ್ರಾಮೀಣ ಭಾಗದವರಿಗೆ ಮೊದಲ ಆದ್ಯತೆ ಇರುತ್ತದೆ. ತರಬೇತಿಯಲ್ಲಿ ಕೌಶಲ್ಯ, ಸಾಫ್ಟ್ ಸ್ಕೀಲ್ಸ್ ಯೋಗ ತರಬೇತಿ ಹಾಗೂ ಬ್ಯಾಂಕಿಂಗ್, ಸರಕಾರಿ ಯೋಜನೆಗಳು ಮತ್ತು ಯೋಜನಾ ವರದಿ ತಯಾರಿಕೆ ಕುರಿತು ಮಾಹಿತಿಯನ್ನು ಉಚಿತವಾಗಿ ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಹಳಿಯಾಳ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‍ಸೆಟ್ ಸಂಸ್ಥೆಯನ್ನು ಅಥವಾ ದೂರವಾಣಿ ಸಂಖ್ಯೆ: 08284-295307, 220807, ಮೊಬೈಲ್ ಸಂಖ್ಯೆ: 94834 85489, 94821 88780, 81970 22501, 98447 96998ಗೆ ಸಂಪರ್ಕಿಸಬಹುದೆಂದು ಕೆನರಾ ಬ್ಯಾಂಕ್ ದೇಶಪಾಂಡೆ ಆರ್‍ಸೆಟ್ ಸಂಸ್ಥೆಯ ನಿರ್ದೇಶಕ ಪ್ರಸನ್ನಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜೆಸಿಬಿ ಆಪರೇಟರ್ ತರಬೇತಿ: ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‍ಸೆಟ್ ಸಂಸ್ಥೆಯಿಂದ 30 ದಿನಗಳ ಉಚಿತ ಜೆಸಿಬಿ ಆಪರೇಟರ್ ತರಬೇತಿ ಹಾಗೂ 10 ದಿನಗಳ ಟ್ರಾವೆಲ್ ಮತ್ತು ಟೂರಿಸ್ಟ್ ಗೈಡ್ ತರಬೇತಿಯನ್ನು ಹಮ್ಮಿಕೊಳ್ಳಲಾಗುತ್ತಿದೆ.
ತರಬೇತಿಯನ್ನು ಊಟ- ವಸತಿಯೊಂದಿಗೆ ನೀಡಲಾಗುವುದು. 18ರಿಂದ 45ರ ವರ್ಷದೊಳಗಿನ ಆಸಕ್ತ ಯುವಕರು ತಮ್ಮ ಹೆಸರು, ಪೂರ್ಣ ಪೋಸ್ಟಲ್ ವಿಳಾಸ, ಮೊಬೈಲ್ ಸಂಖ್ಯೆ, ವಿದ್ಯಾರ್ಹತೆ, ತರಬೇತಿಯ ಅವಶ್ಯಕತೆ, ಈಗ ಮಾಡುತ್ತಿರುವ ಕೆಲಸದ ವಿವರಗಳೊಂದಿಗೆ ಜೆಸಿಬಿ ತರಬೇತಿಗೆ ಅರ್ಜಿಯನ್ನು ಏ.30ರೊಳಗೆ, ಟ್ರಾವೆಲ್ ಮತ್ತು ಟೂರಿಸ್ಟ್ ಗೈಡ್ ತರಬೇತಿಗೆ ಮೇ 10ರೊಳಗೆ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‍ಸೆಟಿ ವಿಸ್ತರಣಾ ಕೇಂದ್ರ, ಹಸನಮಾಳ, ದಾಂಡೇಲಿ- 581 325 ವಿಳಾಸಕ್ಕೆ ಅಥವಾ ವಾಟ್ಸಪ್ ಮೂಲಕ ಕಳುಹಿಸಬಹುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08284- 298 547, 94497 82425, 80507 41744, 63634 29889ಗೆ ಸಂಪರ್ಕಿಸಬಹುದಾಗಿದೆ ಎಂದು ಕೆನರಾ ಬ್ಯಾಂಕ್ ದೇಶಪಾಂಡೆ ಆರ್‍ಸೆಟ್ ವಿಸ್ತರಣಾ ಕೇಂದ್ರದ ಪ್ರಕಟಣೆಯಲ್ಲಿ ತಿಳಿಸಿದೆ.