ಹಳಿಯಾಳ: ಮುಂದಿನ ಒಂದು ವರ್ಷದೊಳಗಾಗಿ ಜರುಗಲಿರುವ ವಿಧಾನಸಭಾ ಚುನಾವಣೆಯಲ್ಲಿ ಕಣಕ್ಕಿಳಿದೇ ತೀರುತ್ತೇನೆ ಎಂದು ಸವಾಲು ಹಾಕಿರುವ ವಿಧಾನ ಪರಿಷತ್‌ನ ಮಾಜಿ ಸದಸ್ಯ ಮತ್ತು ಕಾಂಗ್ರೆಸ್‌ನ ಹಿರಿಯ ಧುರೀಣ ಎಸ.ಎಲ್.ಘೋಟ್ನೇಕರ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲು ರಾಜ್ಯಪಾಲ ತಾವರಚಂದ್ ಗೆಹೋಟ್ ಅನುಮತಿ ನೀಡಿದ್ದಾರೆ. ಈ ಘಟನೆಯಿಂದ ಅವರಿಗೆ ರಾಜಕೀಯ ಹಿನ್ನಡೆಯಾಗಲಿದೆ ಎಂದು ಹೇಳಲಾಗುತ್ತಿದೆ.
ಸರಕಾರಿ ಅನುದಾನ ದುರ್ಬಳಕೆ ಮಾಡಿಕೊಂಡಿರುವ ಪ್ರಕರಣದಲ್ಲಿ ಭಾಗಿಯಾಗಿರುವ ಜಿಲ್ಲೆಯ ಮೊದಲ ವಿಧಾನ ಪರಿಷತ್ ಶಾಸಕರು ಎನ್ನುವ ಆಪಾದನೆಗೆ ಘೋಟೇಕರ್ ಒಳಗಾಗುವಂತಾಗಿದೆ.ಲೋಕಾಯುಕ್ತರು ಮಾಡಿರುವ ಶಿಫಾರಸು ಗಳನ್ನು ಅಂಗೀಕರಿಸಿರುವ ರಾಜ್ಯಪಾಲರು, ಶ್ರೀಕಾಂತ್ ಘೋಟ್ನೇಕರ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲು ಮತ್ತು ಸರ್ಕಾರದ ಅನುದಾನವನ್ನು ವಸೂಲಿ ಮಾಡಲು ಲೋಕಾ ಯುಕ್ತ ವರದಿಯನ್ನು ಸಕ್ಷಮ ಅಧಿಕಾರಿಗಳಿಗೆ ಕಳುಹಿಸಲು ಆದೇಶ ಹೊರಡಿಸಿದ್ದಾರೆಂದು ತಿಳಿದು ಬಂದಿದೆ.
ಘೋಟ್ನೇಕರ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲು ಅನುಮತಿ ನೀಡಿದ ರಾಜ್ಯಪಾಲ
