ಕಾರವಾರ: ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ 7 ಮತ್ತು 8 ಮೇ 2022ರಂದು ಕರ್ನಾಟಕ ರಾಜ್ಯ ಹಿರಿಯ ಪುರುಷ ಹಾಗೂ ಮಹಿಳೆ ಮತ್ತು 20 ವರ್ಷದೊಳಗಿನ ಬಾಲಕ/ಬಾಲಕಿಯರ ಅಥ್ಲೆಟಿಕ್ಸ್ ಕ್ರೀಡಾಕೂಟ ನಡೆಯಲಿದೆ.
ಈ ಕ್ರೀಡಾಕೂಟದಲ್ಲಿ ಭಾಗವಹಿಸಲಿಚ್ಛಿಸುವ ಉತ್ತರ ಕನ್ನಡ ಜಿಲ್ಲೆಯ ಅಥ್ಲೀಟ್‌ಗಳು ಜನ್ಮ ದಿನಾಂಕ, ಮೊಬೈಲ್ ಸಂಖ್ಯೆ ಮತ್ತು ರೂ. 500/-ಗಳನ್ನು ಕರ್ನಾಟಕ ರಾಜ್ಯ ಅಥ್ಲೆಟಿಕ್ಸ್ ಸಂಸ್ಥೆಗೆ ಏ 30 ರೊಳಗೆ ಸಲ್ಲಿಸಬೇಕಾಗುತ್ತದೆ.
ಹೆಚ್ಚಿನ ವಿವರ ಹಾಗೂ ನೋಂದಣಿಗಾಗಿ ಉತ್ತರ ಕನ್ನಡ ಜಿಲ್ಲಾ ಅಥ್ಲೆಟಿಕ್ಸ್ ಸಂಸ್ಥೆಯ ಕಾರ್ಯದರ್ಶಿಗಳಾದ ಕೆ. ಆರ್. ನಾಯಕ ಬೇಲೇಕೇರಿ, ಮೊ. ಸಂಖ್ಯೆ 9845846351 ಇವರನ್ನು ಸಂಪರ್ಕಿಸಬೇಕೆAದು ಸಂಸ್ಥೆಯ ಅಧ್ಯಕ್ಷ ಸದಾನಂದ ಎಂ. ನಾಯ್ಕ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಮೇ 7, 8ಕ್ಕೆ ಬೆಂಗಳೂರಿನಲ್ಲಿ ಅಥ್ಲೆಟಿಕ್ಸ್ ಕ್ರೀಡಾಕೂಟ
