• first
    second
    third
    Slide
    previous arrow
    next arrow
  • ಸಿದ್ದಾಪುರದಲ್ಲಿ ನಡೆದ ತಾಲೂಕಾ ಮಟ್ಟದ ಆರೋಗ್ಯಮೇಳ

    300x250 AD

    ಸಿದ್ದಾಪುರ: ತಾಲೂಕಿನಲ್ಲಿ 75 ನೇ ವರ್ಷದ ಸ್ವಾತಂತ್ರ‍್ಯದ ಅಮೃತ ಮಹೋತ್ಸವ ಅಂಗವಾಗಿ ತಾಲೂಕಾ ಮಟ್ಟದ ಆರೋಗ್ಯ ಮೇಳ ಕಾರ್ಯಕ್ರಮವನ್ನು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಉದ್ಘಾಟಿಸಿದರು.

    ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು ,ನಮ್ಮ ಹಿರಿಯರು ಗಳಿಸಿಕೊಟ್ಟ ಸ್ವಾತಂತ್ರ‍್ಯದ 75ನೇ ವರ್ಷದ ಅಮೃತಮಹೋತ್ಸವ ಕಾರ್ಯಕ್ರಮವನ್ನು ವಿವಿಧ ರೀತಿಯಲ್ಲಿ ಅಚರಿಸಲಾಗುತ್ತಿದೆ ಇದರ ಅಂಗವಾಗಿ ಪ್ರತಿ ತಾಲೂಕಿನಲ್ಲಿ ಆರೋಗ್ಯಮೇಳವನ್ನು ಏರ್ಪಡಿಸಲಾಗುತ್ತಿದೆ ಸರಕಾರ ಸಾಕಷ್ಟು ಜನಪರ ಯೋಜನೆಗಳನ್ನು ತರುತ್ತಿದೆ ಅದರ ಉಪಯೋಗವನ್ನು ಜನರಿಗೆ ತಿಳಿಸುವ ಕೆಲಸವನ್ನು ಇಲಾಖೆಗಳು ಮಾಡಬೇಕು. ನಮ್ಮ ಆರೋಗ್ಯವನ್ನು ನಾವೆ ರಕ್ಷಿಸಿಕೊಳ್ಳಬೇಕು ಇಂದಿನ ಆಹಾರ ಪದ್ದತಿಯಿಮದ ಹಲವು ಖಾಯಿಲೆಗಳು ನಮ್ಮನ್ನು ಕಾಡುತ್ತಿವೆ ನಮ್ಮನ್ನು ನಾವು ನಿಯಂತ್ರಿಸಿಕೊಳ್ಳುವುದರ ಮೂಲಕ ಸಾಕಷ್ಟು ಖಾಯಿಲೆಯನ್ನು ತಡೆಗಟ್ಟಬಹುದು ಎಂದರು.

    300x250 AD

    ಸರಕಾರ ಯಶಸ್ವಿನಿ ಯೋಜನೆಯನ್ನು ಜಾರಿಗೆ ತರುತ್ತಿದೆ ಇದರಿಂದ 5 ಲಕ್ಷರೂ.ವರೆಗೆ ಉಚಿತ ಚಿಕಿತ್ಸೆ ದೊರಕುತ್ತದೆ. ಇದರ ಉಪಯೋಗವನ್ನು ಜನರು ಪಡೆದುಕೊಳ್ಳಬೇಕು ಎಂದು ಹೇಳಿದರು.

    Share This
    300x250 AD
    300x250 AD
    300x250 AD
    Back to top