ಹೊನ್ನಾವರ: ತಾಲೂಕಿನ ಗೇರುಸೊಪ್ಪಾದ ಸುಳೆಮುರ್ಕಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿದೆ.
ಬೆಂಗಳೂರು ಮೂಲದ ಪ್ರವಾಸಿಗರು ಶಿವಮೊಗ್ಗ ಪ್ರವಾಸ ಮುಗಿಸಿ ಉತ್ತರಕನ್ನಡ ಜಿಲ್ಲೆಯ ಗೊಕರ್ಣ, ಮುರ್ಡೆಶ್ವರ ಪ್ರವಾಸಕ್ಕೆ ಆಗಮಿಸುವ ಪೂರ್ವದಲ್ಲಿ ಅಪಘಾತ ಸಂಭವಿಸಿದೆ. ವಾಹನ ಚಾಲಕ ಲಕ್ಕುಂದ ರಾಜಕುಮಾರ ಎನ್ನುವ ಚಾಲಕ ಅತಿವೇಗ ಹಾಗೂ ನಿರ್ಲಕ್ಷ್ಯ ಚಾಲನೆಯೆ ಅಪಘಾತಕ್ಕೆ ಕಾರಣವಾಗಿದೆ.
ಬಸ್ ಅಪಘಾತದಿಂದ 28 ಪ್ರವಾಸಿಗರಿಗೆ ಗಾಯಗಳಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಸ್ ಚಾಲಕನ ವಿರುದ್ದ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳದಲ್ಲಿ ಟ್ರಾಪಿಕ್ ಸಮಸ್ಯೆ ಉದ್ಭವಿಸದಂತೆ ಗಾಯಗೊಂಡವರನ್ನು ಅಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸಲು ಸ್ಥಳಿಯ ಸಾರ್ವಜನಿಕರು ಪೊಲೀಸರಿಗೆ ಸಹಕಾರ ನೀಡಿದ್ದಾರೆ.