ಯಲ್ಲಾಪುರ: ತಾಲೂಕಿನ ಹೆಸರಾಂತ ಉದ್ಯಮಿಗಳು ಹಾಗೂ ಸಾಮಾಜಿಕ ಕಾರ್ಯಕರ್ತರು ಆಗಿರುವ ಎಂ ಜಿ ಭಟ್ ರವರನ್ನು ಕರ್ನಾಟಕ ರಾಜ್ಯ ಸರಕಾರಿ ಭೂಮಿ ಉಳಿಸಿ ಹೋರಾಟ ಸಮಿತಿಯ ಉತ್ತರ ಕನ್ನಡ ಜಿಲ್ಲಾಧ್ಯಕ್ಷರನ್ನಾಗಿ ಕರ್ನಾಟಕ ರಾಜ್ಯ ಸರಕಾರಿ ಭೂಮಿ ಉಳಿಸಿ ಹೋರಾಟ ಸಮಿತಿಯ ರಾಜ್ಯಾಧ್ಯಕ್ಷ ಡಾ. ನಾಗರಾಜ ನಾಯ್ಕ ನೇಮಕ ಮಾಡಿದ್ದಾರೆ.
ಶಿರಸಿ ನಗರದ ಮಧುವನ ಹೊಟೇಲ್ ನ ಆರಾಧನಾ ಸಭಾಭವನದಲ್ಲಿ ನಡೆದ ಕರ್ನಾಟಕ ರಾಜ್ಯ ಸರಕಾರಿ ಭೂಮಿ ಉಳಿಸಿ ಹೋರಾಟ ಸಮಿತಿಯ ಸಭೆಯಲ್ಲಿ ಜಿಲ್ಲೆಯ ವಿವಿಧ ತಾಲೂಕಿನಿಂದ ಆಗಮಿಸಿದ್ದ ಸಮಿತಿಯ ಪದಾಧಿಕಾರಿಗಳ ಜೊತೆ ಚರ್ಚಿಸಿ ಎಲ್ಲರ ಒಮ್ಮತದ ಅಭಿಪ್ರಾಯ ಸಂಗ್ರಹಿಸಿ ಸಮಿತಿಯ ಉತ್ತರ ಕನ್ನಡ ಜಿಲ್ಲಾಧ್ಯಕ್ಷರಾಗಿ ಎಂ ಜಿ ಭಟ್ ರವರನ್ನು ಸಮಿತಿಯ ರಾಜ್ಯಾಧ್ಯಕ್ಷರಾದ ಡಾ. ನಾಗರಾಜ ನಾಯ್ಕ ನೇಮಕ ಮಾಡಿರುತ್ತಾರೆ.
ಕರ್ನಾಟಕ ರಾಜ್ಯದಲ್ಲಿ ಅರಣ್ಯ ಭೂಮಿ, ಗಾಂವಠಾಣ ಜಾಗ, ಗೋಮಾಳ ಜಾಗ, ಕರಾಬು ಜಾಗ, ಕೆರೆ, ರಾಜಕಾಲುವೆ ಇದಲ್ಲದೆ ಹಲವಾರು ರೀತಿಯ ಸರ್ಕಾರದ ಜಾಗಗಳನ್ನು ಅತಿಕ್ರಮಣ ಮಾಡಿ ರಾಜಾರೋಷವಾಗಿ ಮಾರಾಟ ಮಾಡುತ್ತಿರುವುದು ನಡೆಯುತ್ತಿದೆ. ಇದರ ವಿರುದ್ಧ ಹೋರಾಡುವುದು ಅನಿವಾರ್ಯ ವಾಗಿದೆ. ಸರಕಾರಿ ಭೂಮಿಗಳನ್ನು ರಕ್ಷಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ ವಾಗಿದೆ. ಈ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಸರಕಾರಿ ಭೂಮಿ ಉಳಿಸಿ ಹೋರಾಟ ಸಮಿತಿಯು ರಾಜ್ಯದಾದ್ಯಂತ ಕಾರ್ಯನಿರ್ವಹಿಸಲಿದೆ ಎಂದು ಡಾ. ನಾಗರಾಜ ನಾಯ್ಕ ತಿಳಿಸಿದರು.
ಈ ಸಂದರ್ಭದಲ್ಲಿ ನೂತನ ಜಿಲ್ಲಾಧ್ಯಕ್ಷರಾದ ಎಂ ಜಿ ಭಟ್ ಮಾತನಾಡಿ ನಾನು ಪ್ರಾಮಾಣಿಕವಾಗಿ ಸರಕಾರಿ ಭೂಮಿಗಳನ್ನು ಉಳಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತೇನೆ. ಸರಕಾರಿ ಭೂಮಿಗಳನ್ನು ರಕ್ಷಿಸಲು ಜಿಲ್ಲೆಯ ಎಲ್ಲಾ ಇಲಾಖೆಯ ಅಧಿಕಾರಿಗಳು ನಮಗೆ ಸಹಕರಿಸಬೇಕು ಎಂದರು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸರಕಾರಿ ಭೂಮಿ ಉಳಿಸಿ ಹೋರಾಟ ಸಮಿತಿಯ ರಾಜ್ಯ ಸಂಘಟನಾ ಕಾರ್ಯದರ್ಶಿ ಆಂಜನೇಯ ಟಿ ಈಡಿಗ ಮಾತನಾಡಿ ಶುಭ ಹಾರೈಸಿದರು . ಈ ಸಂದರ್ಭದಲ್ಲಿ ನೂತನವಾಗಿ ನೇಮಕವಾದ ಎಂ ಜಿ ಭಟ್ ಹಾಗೂ ಇತರರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷರಾದ ಎನ್ ಬಿ ಕುಮಾರ್, ರಾಜ್ಯ ಕಾರ್ಯದರ್ಶಿ ಪ್ರಕಾಶ್ ಕಟ್ಟಿಮನಿ, ಯುವ ಘಟಕದ ರಾಜ್ಯ ಸಂಘಟನಾ ಕಾರ್ಯದರ್ಶಿ ಆನಂದ ಈಡಿಗ, ಯಲ್ಲಾಪುರ ತಾಲೂಕು ಅಧ್ಯಕ್ಷರಾದ ಧೀರಜ್ ತಿನೇಕರ್, ದರ್ಶನ್ ನಾಯ್ಕ, ಚಂದ್ರಶೇಖರ್ ಪೂಜಾರ್ ಮುಂತಾದವರು ಉಪಸ್ಥಿತರಿದ್ದರು.