Slide
Slide
Slide
previous arrow
next arrow

KSRTC ಬಸ್ ನಲ್ಲಿ ಅಕ್ರಮವಾಗಿ ಗೋವಾ ಮದ್ಯ ಸಾಗಿಸುತ್ತಿದ್ದ ಇಬ್ಬರ ಬಂಧನ

300x250 AD

ಕಾರವಾರ : ಅಬಕಾರಿ ಇಲಾಖೆ ಹಾಗೂ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಸಾಗರ-ಪಣಜಿ ಕೆ.ಎಸ್.ಆರ್.ಟಿ.ಸಿ ಬಸ್ ನಲ್ಲಿ ಅಕ್ರಮವಾಗಿ ಗೋವಾ ಮದ್ಯ ಸಾಗಿಸುತ್ತಿದ್ದ ಇಬ್ಬರನ್ನು ವಶಕ್ಕೆ ಪಡೆದು 1,27000 ಸಾವಿರ ಮೌಲ್ಯದ ದುಬಾರಿ ಬೆಲೆಯ ವಿವಿಧ ಬ್ರಾಂಡ್ ನ ಗೋವಾ ಮದ್ಯ ವನ್ನು ವಶಪಡಿಸಿಕೊಂಡ ಘಟನೆ ಕಾರವಾರ ತಾಲೂಕಿನ ಮಾಜಾಳಿಯ ಚಕ್ ಪೋಸ್ಟ್ ನಲ್ಲಿ ನಡೆದಿದೆ.

ಶಿವಮೊಗ್ಗ ಮೂಲದ ನಾಗರಾಜ (35), ಸಾಗರ್ (25) ಬಂಧಿತರಾಗಿದ್ದು ,ಗೋವಾದಿಂದ ಶಿವಮೊಗ್ಗ ಕ್ಕೆ ಬ್ಯಾಗ್ ನಲ್ಲಿ ವಿವಿಧ ಬ್ರಾಂಡ್ ನ ಮದ್ಯವನ್ನು ತುಂಬಿಕೊಂಡು ಬಸ್ ನಲ್ಲಿ ತೆರಳುತಿದ್ದರು. ಈ ವೇಳೆ ತಪಾಸಣೆ ನಡೆಸಿದ ಅಬಕಾರಿ ಹಾಗೂ ಪೊಲೀಸ್ ಇಲಾಖೆ ಸಿಬ್ಬಂದಿಗಳು ವಶಕ್ಕೆ ಪಡೆದಿದ್ದು ಕಾರವಾರ ಅಬಕಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

300x250 AD
Share This
300x250 AD
300x250 AD
300x250 AD
Back to top