• Slide
    Slide
    Slide
    previous arrow
    next arrow
  • ಸ್ಪರ್ಧಾತ್ಮಕ ಕಲಿಕೆಗಾಗಿ ಗ್ರಾಮ ಪಂಚಾಯಿತಿಗೊಂದು ಮಾದರಿ ಶಾಲೆ:ಸಚಿವ ಹೆಬ್ಬಾರ್

    300x250 AD

    ಯಲ್ಲಾಪುರ: ಶಾಲೆಯಲ್ಲಿ ಮಕ್ಕಳು ಸ್ಪರ್ಧಾತ್ಮಕ ಮನೋಭಾವನೆಯಿಂದ ಓದುವ ವಾತಾವರಣ ನಿರ್ಮಾಣವಾಗಬೇಕು ಎಂದು ಕಾರ್ಮಿಕ ಸಚಿವ ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ಹೇಳಿದರು.

    ವಿಶ್ವದರ್ಶನ ಶಿಕ್ಷಣ ಸಂಸ್ಥೆ ಆವಾರದಲ್ಲಿ ಶುಕ್ರವಾರ ನಡೆದ “ವಿಶ್ವದರ್ಶನ ಸಂಭ್ರಮ” ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿ
    ಮೊದಲು ಹಣ ಉಳ್ಳವವರಿಗೆ ಮಾತ್ರ ಶಿಕ್ಷಣ ಎಂಬ ಕಾಲವಿತ್ತು. ಆದರೆ, ಇದೀಗ ಪ್ರತಿ ಮಕ್ಕಳು ಉತ್ತಮ ಶಾಲೆಯಲ್ಲಿ ಕಲಿಯಲು ಬಯಸುತ್ತಾರೆ. ಸ್ಪರ್ಧಾತ್ಮಕವಾಗಿ ಮಕ್ಕಳು ಕಲಿಯುವ ರೀತಿಯಲ್ಲಿ ಗ್ರಾಮ ಪಂಚಾಯಿತಿಗೊಂದು ಮಾದರಿ ಶಾಲೆಯನ್ನು ಅಭಿವೃದ್ಧಿಪಡಿಸಿ, ಆ ಭಾಗದ ಎಲ್ಲಾ ಮಕ್ಕಳು ಅಲ್ಲಿ ಕಲಿಯುವಂತಹ ವ್ಯವಸ್ಥೆ ಬರಬೇಕು. ಆ ನಿಟ್ಟಿನಲ್ಲಿ ಮಲೆನಾಡು ಭಾಗದ ಶಾಲೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವಂತೆ ಶಿಕ್ಷಣ ಸಚಿವರಿಗೆ ಮನವಿ ಮಾಡಿರುವುದಾಗಿ ಹೇಳಿದರು.

    ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ ಮಾತನಾಡಿ, ಉತ್ತರ ಕನ್ನಡ ಜಿಲ್ಲೆ ಶೈಕ್ಷಣಿಕ, ಧಾರ್ಮಿಕ ಹಾಗೂ ಸಾಂಸ್ಕೃತಿಕವಾಗಿ ಶ್ರೀಮಂತವಾಗಿದೆ. ಶಿಕ್ಷಣ ಸಂಸ್ಥೆಗಳು ಸಂಸ್ಕೃತಿ, ಆತ್ಮವಿಶ್ವಾಸ, ಸ್ವಾವಲಂಬನೆಯಂತಹ ಗುಣಗಳನ್ನು ಬೆಳೆಸಬೇಕು ಎಂದರು.

    300x250 AD

    ಸಂಸ್ಥೆಯ ಅಧ್ಯಕ್ಷರಾದ ಹರಿಪ್ರಕಾಶ ಕೋಣೆಮನೆ ಅವರು ಮಾತನಾಡಿ, ಮೌಲ್ಯಯುತ ಶಿಕ್ಷಣದಿಂದ ಸಮಾಜದ ಸುಧಾರಣೆ ಸಾಧ್ಯವಿದೆ. ಶಿಕ್ಷಣ ಜೀವನದ ದಿಕ್ಕಾಗಬೇಕು ಎಂದರು. ಮುಂದಿನ 4-5 ವರ್ಷಗಳಲ್ಲಿ ವಿಶ್ವದರ್ಶನವನ್ನು ಉತ್ತರ ಕರ್ನಾಟಕ ಭಾಗದ ಪ್ರಮುಖ ಶಿಕ್ಷಣ ಕೇಂದ್ರವಾಗಿ ರೂಪಿಸುವ ಯೋಜನೆ ಹೊಂದಿದ್ದೇವೆ. ಸಂಸ್ಥೆಯ ವಿದ್ಯಾರ್ಥಿ ಉತ್ತಮ ನಾಗರಿಕರಾಗಬೇಕು ಎಂಬುದು ನಮ್ಮ ಉದ್ದೇಶ ಎಂದರು.

    ವಾ.ಕ.ರ.ಸಾ ನಿಗಮದ ಅಧ್ಯಕ್ಷ ವಿ.ಎಸ್.ಪಾಟೀಲ, ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಪ್ರಮೋದ ಹೆಗಡೆ, ಹಾಲಾಡಿ ಶ್ರೀನಿವಾಸ ಶೆಟ್ಟಿ, ಹೈಕೋರ್ಟ ನ್ಯಾಯವಾದಿ ನಾರಾಯಣ ಯಾಜಿ, ವ್ಯವಸ್ಥಾಪಕರಾದ ಗುರುರಾಜ ಕುಂದಾಪುರ ಇತರರು ಇದ್ದರು. ಸಂಸ್ಥೆಯ ಉಪಾಧ್ಯಕ್ಷರಾದ ಶ್ರಿನಿವಾಸ ಹೆಬ್ಬಾರ್ ಸಂಸ್ಥೆಯ ಯೋಜನೆಗಳ ಬಗ್ಗೆ ವಿವರಿಸಿದರು. ಸಂಸ್ಥೆಯ ಕಾರ್ಯದರ್ಶಿಗಳಾದ ನರಸಿಂಹ ಕೋಣೆಮನೆ ಸ್ವಾಗತಿಸಿದರು. ವನಿತಾ ಭಟ್ಟ ವರದಿ ವಾಚಿಸಿದರು. ಡಾ. ಡಿ.ಕೆ ಗಾಂವ್ಕರ್ ನಿರ್ವಹಿಸಿದರು. ವಾಣಿ ಭಟ್ಟ ವಂದಿಸಿದರು.

    Share This
    300x250 AD
    300x250 AD
    300x250 AD
    Leaderboard Ad
    Back to top