ಹಳಿಯಾಳ: ತಾಲೂಕಾ ಮಟ್ಟದ ತ್ರೈಮಾಸಿಕ ಕೆ.ಡಿ.ಪಿ.ಸಭೆಯು ತಾಲೂಕಾ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.
ಸಭೆಯಲ್ಲಿ ಶಾಸಕ ಆರ್.ವಿ.ದೇಶಪಾಂಡೆ ಉಪಸ್ಥಿತರಿದ್ದು ವಿವಿಧ ಇಲಾಖೆಯಡಿ ಅನುಷ್ಠಾನಗೊಂಡ ಹಾಗೂ ಮುಂಬರುವ ಯೋಜನೆಗಳ ಕುರಿತು ಅದಕ್ಕೆ ಸಂಬಂಧಿಸಿದ ಅಧಿಕಾರಿ ವೃಂದದವರೊಂದಿಗೆ ಸಮಾಲೋಚನೆ ನಡೆಸಿ,ಯೋಜನಾ ಕ್ರಮಗಳ ಪ್ರಗತಿ ಪರಿಶೀಲನೆ ನಡೆಸಿದರು.
ಸಭೆಯಲ್ಲಿ ತಾಲೂಕಾ ದಂಡಾಧಿಕಾರಿಗಳು,ತಾಲೂಕ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ತಾಲೂಕಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು,ಪುರಸಭೆ ಅಧ್ಯಕ್ಷರು ಹಾಗೂ ಸದಸ್ಯರು ಉಪಸ್ಥಿತರಿದ್ದರು.