ಶಿರಸಿ:ಪಂಡಿತ ದೀನದಯಾಳ್ ಉಪಾಧ್ಯಾಯ ಸಭಾಂಗಣದಲ್ಲಿ ಆಯೋಜಿಸಿದ್ದ ಭಾರತೀಯ ಜನತಾ ಪಕ್ಷದ ಉತ್ತರಕನ್ನಡ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಕಾರ್ಮಿಕ ಖಾತೆ ಸಚಿವ ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ಪಾಲ್ಗೊಂಡಿದ್ದರು.
ದೀಪ ಬೆಳಗಿಸುವುದರ ಮೂಲಕ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿದ ಸಚಿವರು, ಜಿಲ್ಲೆಯ ಪಕ್ಷದ ಪದಾಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ವೆಂಕಟೇಶ್ ನಾಯಕ, ಶಾಸಕ ದಿನಕರ ಕೆ ಶೆಟ್ಟಿ, ಸುನೀಲ್ ನಾಯ್ಕ, ವಿಧಾನಪರಿಷತ ಸದಸ್ಯ ಗಣಪತಿ ಉಳ್ವೇಕರ್, ಪಂಚಾಯತ ರಾಜ್ಯ ವಿಕೇಂದ್ರೀಕರಣ ಸಮಿತಿಯ ಉಪಾಧ್ಯಕ್ಷ ಪ್ರಮೋದ ಹೆಗಡೆ ಹಾಗೂ ಜಿಲ್ಲೆಯ ವಿವಿಧಸ್ತರದ ಪದಾಧಿಕಾರಿಗಳು ಉಪಸ್ಥಿತರಿದ್ದರು