• Slide
    Slide
    Slide
    previous arrow
    next arrow
  • ಮೇ 3ಕ್ಕೆ ಅಮಿತ್ ಶಾ ಬೆಂಗಳೂರಿಗೆ; ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ಸಾಧ್ಯತೆ

    300x250 AD

    ಕಾರವಾರ: ಮೇ 3ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಬೆಂಗಳೂರಿಗೆ ಭೇಟಿ ನೀಡಲಿದ್ದು ಅಂದು ಮಧ್ಯಾಹ್ನ ಮುಖ್ಯಮಂತ್ರಿಗಳ ಸರ್ಕಾರಿ ನಿವಾಸದಲ್ಲಿ ಭೋಜನ ಮಾಡಲಿದ್ದಾರೆ. ಇದೇ ವೇಳೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಗ್ಗೆಯೂ ಚರ್ಚೆ ನಡೆಯುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

    ಅಮಿತ್ ಶಾ ಪ್ರವಾಸದ ವೇಳಾಪಟ್ಟಿ ಬಿಡುಗಡೆಯಾಗಿದ್ದು, ಮೇ 3ರ ಬೆಳಗ್ಗೆ 10ಕ್ಕೆ ಬೆಂಗಳೂರಿನ ಚಾಲುಕ್ಯ ವೃತ್ತದಲ್ಲಿರುವ ಬಸವಣ್ಣನ ಪ್ರತಿಮೆಗೆ ಮಾಲಾರ್ಪಣೆ ಮಾಡಲಿದ್ದಾರೆ. 10.30ಕ್ಕೆ ಆರ್‍ಬಿಐ ಎದುರು ನೃಪತುಂಗ ವಿವಿಗೆ ಗುದ್ದಲಿ ಪೂಜೆ ನೆರವೇರಿಸಲಿದ್ದು, ಬಳಿಕ ಬಳ್ಳಾರಿಯಲ್ಲಿನ ಫೋರೆನ್ಸಿಕ್ ಲ್ಯಾಬ್‍ನ ವರ್ಚುವಲ್‍ನಲ್ಲಿ ಉದ್ಘಾಟಿಸಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಯಲಹಂಕದಲ್ಲಿ ಕೇಂದ್ರದ ಗೃಹ ಸಚಿವಾಲಯದ ಡಿಆರ್‍ಸಿ ಕೇಂದ್ರದ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಮಧ್ಯಾಹ್ನ 2 ಗಂಟೆಯಿಂದ 3ರವರೆಗೆ ಸಿಎಂ ಅವರ ಸರ್ಕಾರಿ ನಿವಾಸದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆ ಅಮಿತ್ ಶಾ ಮಧ್ಯಾಹ್ನದ ಭೋಜನ ಮಾಡಲಿದ್ದಾರೆ.

    300x250 AD

    ಸಂಜೆ 4-5 ಗಂಟೆ ವೇಳೆಗೆ ಬಿಜೆಪಿ ಕಚೇರಿಗೆ ಗೃಹ ಸಚಿವರು ಭೇಟಿ ನೀಡಲಿದ್ದಾರೆ. ಸಂಜೆ 5.30ರಿಂದ 7 ಗಂಟೆ ಸಮಯದಲ್ಲಿ ಖೇಲೋ ಇಂಡಿಯಾ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲಿದ್ದು ರಾತ್ರಿ 8.15ರ ವೇಳೆಗೆ ಹೆಚ್‍ಎಎಲ್ ಮೂಲಕ ಶಾ ವಿಶೇಷ ವಿಮಾನದಲ್ಲಿ ದೆಹಲಿಗೆ ವಾಪಸಾಗಲಿದ್ದಾರೆ. ಸಿಎಂ ನಿವಾಸದಲ್ಲಿ ಭೋಜನದ ವೇಳೆ ಸಂಪುಟ ವಿಸ್ತರಣೆ ಚರ್ಚೆ ನಡೆಯುವ ಸಾಧ್ಯತೆ ಇದೆ. ಇದೇ ವೇಳೆ ರಾಜ್ಯದಲ್ಲಿನ ಪ್ರಸ್ತುತ ಬೆಳವಣಿಗೆ, ಸಂಪುಟ ವಿಸ್ತರಣೆ ಮಾಡಬೇಕೋ?, ಪುನಾರಚಿಸಬೇಕೋ ಎಂಬ ಬಗ್ಗೆ ಸಮಾಲೋಚನೆ ನಡೆಯಲಿದೆ. ಈ ವೇಳೆ ಗ್ರೀನ್ ಸಿಗ್ನಲ್ ಸಿಗುವ ಸಾಧ್ಯತೆಯೂ ಇದೆ ಎಂದು ಹೇಳಲಾಗಿದೆ.

    Share This
    300x250 AD
    300x250 AD
    300x250 AD
    Leaderboard Ad
    Back to top