ಯಲ್ಲಾಪುರ: ಪಟ್ಟಣದ ವಿಶ್ವದರ್ಶನ ಶಿಕ್ಷಣ ಸಂಸ್ಥೆ ಆವಾರದಲ್ಲಿ ನಿರ್ಮಿಸಲಾದ “ಶ್ರೀ ಶ್ರೀಮದ್ ಗಂಗಾಧರೇoದ್ರ ಸರಸ್ವತೀ” ಸಭಾಭವನ ಮೇ. 4ರಂದು ಉದ್ಘಾಟನೆಯಾಗಲಿದೆ.
ಅಂದು ಮಧ್ಯಾಹ್ನ 4ಗಂಟೆಗೆ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಸಭಾ ಭವನವನ್ನು ಉದ್ಘಾಟಿಸಲಿದ್ದಾರೆ. ಸೋಂದಾ ಸ್ವರ್ಣವಲ್ಲಿ ಮಹಾ ಸಂಸ್ಥಾನದ ಶ್ರೀ ಶ್ರೀಮದ್ ಗಂಗಾಧರೇoದ್ರ ಸರಸ್ವತೀ ಸ್ವಾಮೀಜಿ ಕಾರ್ಯಕ್ರಮದ ಸಾನಿಧ್ಯ ವಹಿಸಲಿದ್ದು, ಆಶೀರ್ವಚನ ನೀಡಲಿದ್ದಾರೆ. ವಿಶ್ವದರ್ಶನ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷರಾದ ಶ್ರೀನಿವಾಸ ಹೆಬ್ಬಾರ್, ಜಿಲ್ಲಾಧಿಕಾರಿ ಮುಲೈ ಮುಹಿಲನ್ ಮೊದಲಾದವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಮೇ.4ರಂದು ವಿಶ್ವದರ್ಶನದಲ್ಲಿ ‘ಶ್ರೀ ಶ್ರೀಮದ್ ಗಂಗಾಧರೇoದ್ರ ಸರಸ್ವತೀ’ ಸಭಾಭವನ ಉದ್ಘಾಟನೆ
