• Slide
  Slide
  Slide
  previous arrow
  next arrow
 • ಕಾರು ಅಪಘಾತ; ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ರತ್ನಾಕರ್ ಗಂಭೀರ

  300x250 AD

  ಬೈಂದೂರು (ಕುಂದಾಪುರ): ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ರತ್ನಾಕರ ನಾಯ್ಕ್ ಗಂಭೀರ ಗಾಯಗೊಂಡ ಘಟನೆ ತಾಲೂಕಿನ ನಾಗೂರು ಶ್ರೀವೀರಾಂಜನೇಯ ದೇವಸ್ಥಾನದ ಎದುರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ನಡೆದಿದೆ.

  ನಾಗೂರಿನ ವೀರಾಂಜನೇಯ ದೇವಸ್ಥಾನದ ಎದುರುಗಡೆಯ ಡಿವೈಡರ್ ಗೆ ಡಿಕ್ಕಿ ಹೊಡೆದು ವಿದ್ಯುತ್ ಕಂಬಕ್ಕೆ ರಭಸವಾಗಿ ಹೊಡೆದುದರಿಂದ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ರತ್ನಾಕರ್ ಅವರ ಕೈ ಬೆರಳುಗಳು ತುಂಡಾಗಿ ತಲೆಗೆ ಬಲವಾದ ಪೆಟ್ಟು ಬಿದ್ದಿದೆ. ಗಾಯಗೊಂಡವರನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿದ್ದ ಮತ್ತೊಬ್ಬರಿಗೂ ಗಾಯವಾಗಿದೆ ಎಂದು ತಿಳಿದುಬಂದಿದೆ.

  ಘಟನಾ ಸ್ಥಳಕ್ಕೆ ಬೈಂದೂರು ಠಾಣೆ ಪಿಎಸ್‍ಐ ಪವನ್ ನಾಯಕ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯರು ಅಂಬ್ಯುಲೆನ್ಸ್ ಮೂಲಕ ವ್ಯಕ್ತಿಯನ್ನು ಆಸ್ಪತ್ರೆಗೆ ಕೊಂಡೊಯ್ಯಲು ಸಹಕಾರ ನೀಡಿದ್ದಾರೆ. ಘಟನೆ ನಡೆದ ಸ್ಥಳದಿಂದ ಒಂದು ಕಿಲೋಮೀಟರ್ ದೂರಕ್ಕೆ ಟ್ರಾಫಿಕ್ ಜಾಮ್ ಆಗಿತ್ತು.

  300x250 AD

  ಅಂಗವಿಕಲ ವ್ಯಕ್ತಿಯ ಮಾನವೀಯತೆ; ವಿಕಲಚೇತನರಾಗಿರುವ ಜಮಾತ್ ಮಾಜಿ ಅಧ್ಯಕ್ಷ ಉಬೈದುಲ್ಲಾ ಎಂ.ಎಚ್ ಅವರು ಹಾದು ಹೋಗುತ್ತಿದ್ದ ಅಂಬ್ಯುಲೆನ್ಸ್ ನಿಲ್ಲಿಸಿ ಗಾಯಾಳುಗಳನ್ನು ಪ್ರಥಮ ಚಿಕಿತ್ಸೆಗಾಗಿ ಕುಂದಾಪುರ ಖಾಸಗಿ ಆಸ್ಪತ್ರೆಗೆ ಸ್ವತಃ ತಾನು ಜೊತೆಯಾಗಿ ಕರೆದುಕೊಂಡು ಹೋಗಿದ್ದಾರೆ. ಅಪಘಾತ ಸ್ಥಳದಲ್ಲಿ ತುಂಡರಿಸಿ ಬಿದ್ದಿದ್ದ ಎರಡು ಬೆರಳುಗಳನ್ನು ನಾಗೂರು ನಿವಾಸಿ ನತರ್ ಅವರು ಇಬ್ರಾಹಿಂ ಗಂಗೊಳ್ಳಿ ಹಾಗೂ ಕೃಷ್ಣ ಅವರ ಆಂಬ್ಯುಲೆನ್ಸ್‍ನಲ್ಲಿ ಕುಂದಾಪುರ ಆಸ್ಪತ್ರೆ ತನಕ ಶೀತಲೀಕೃತ ವ್ಯವಸ್ಥೆ ಮೂಲಕ ಕೊಂಡೊಯ್ದು ಕುಂದಾಪುರ ಸಂಚಾರ ಠಾಣೆಯ ಎಸ್‍ಐ ಸುಧಾ ಪ್ರಭು ಹಾಗೂ ಸಿಬ್ಬಂದಿ ಸಹಕಾರದೊಂದಿಗೆ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲಕ್ಕೆ ಕೊಂಡೊಯ್ಯುತ್ತಿದ್ದ ಕಾರವಾರ ಮೂಲದ ಆಂಬ್ಯುಲೆನ್ಸ್ ಚಾಲಕನಿಗೆ ಹಸ್ತಾಂತರಿಸಿದರು.

  Share This
  300x250 AD
  300x250 AD
  300x250 AD
  Leaderboard Ad
  Back to top