ಶಿರಸಿ: ರಾಜ್ಯ ಕಾರ್ಮಿಕ ಖಾತೆ ಸಚಿವ ಹಾಗೂ ಕೆ.ಡಿ.ಸಿ.ಸಿ ಬ್ಯಾಂಕ್ನ ಅಧ್ಯಕ್ಷ ಶಿವರಾಮ ಹೆಬ್ಬಾರ್ ಅವರು ಕೆ.ಡಿ.ಸಿ.ಸಿ ಬ್ಯಾಂಕ್ ಇತಿಹಾಸದಲ್ಲೇ ಮೊದಲ ಬಾರಿಗೆ ಬ್ಯಾಂಕ್ನ ನಿವೃತ್ತ ನೌಕರರಿಗೆ ಪಿಂಚಣಿ ಸೌಲಭ್ಯಗಳನ್ನು ನೀಡುವ ಯೋಜನೆಯನ್ನು ಜಾರಿಗೊಳಿಸಿದ್ದಾರೆ.
ಸೋಮವಾರ ಸಚಿವ ಶಿವರಾಮ ಹೆಬ್ಬಾರ್ ಅವರು ಬ್ಯಾಂಕ್ನ ಪ್ರಧಾನ ಕಾರ್ಯಾಲಯದ ಸಭಾಂಗಣದಲ್ಲಿ ಬ್ಯಾಂಕ್ನ ನಿವೃತ್ತ ನೌಕರರಿಗೆ ಸಾಂಕೇತಿಕವಾಗಿ ಪಿಂಚಣಿ ಚೆಕ್ ಅನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಕೆ.ಡಿ.ಸಿ.ಸಿ ಬ್ಯಾಂಕ್ನ ಉಪಾಧ್ಯಕ್ಷರು, ಸರ್ವ ನಿರ್ದೇಶಕರು, ವ್ಯವಸ್ಥಾಪಕ ನಿರ್ದೇಶಕರು ಹಾಗೂ ಸಹಾಯಕ ವ್ಯವಸ್ಥಾಪಕರು, ನಿವೃತ್ತ ನೌಕರರು, ಬ್ಯಾಂಕ್ ಸಿಬ್ಬಂದಿ ಉಪಸ್ಥಿತರಿದ್ದರು.