ದಾಂಡೇಲಿ : ಕನ್ನಡ ಸಾಹಿತ್ಯ ಪರಿಷತ್ತು ಉತ್ತರ ಕನ್ನಡ ಜಿಲ್ಲಾ ಘಟಕ ಹಾಗೂ ದಾಂಡೇಲಿ ತಾಲೂಕು ಘಟಕದ ಆಶ್ರಯದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ 108ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮ ಆಶಾಕಿರಣ ಐಟಿಐ ಕಾಲೇಜಿನಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಕಲಾಶ್ರೀ ಸಂಸ್ಥೆಯ ಅಧ್ಯಕ್ಷ ಪ್ರಕಾಶ್ ಶೆಟ್ಟಿ ಉದ್ಘಾಟಿಸಿದರು. ಕಸಾಪ ಜಿಲ್ಲಾಧ್ಯಕ್ಷ ಬಿ.ಎನ್. ವಾಸರೆಯವರು ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪನ್ಯಾಸಕಿ ನಿರುಪಮಾ ನಾಯಕ ‘ಕನ್ನಡ ಕಟ್ಟುವಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಐತಿಹಾಸಿಕ ಹೆಜ್ಜೆ ಗುರುತುಗಳು’ ಎಂಬ ವಿಚಾರವಾಗಿ ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ಕಸಾಪ ಜಿಲ್ಲಾ ಗೌರವ ಕೋಶಾಧ್ಯಕ್ಷ ಮುರ್ತುಜಾ ಹುಸೇನ್, ಆನೆ ಹೊಸೂರ, ಆಶಾಕಿರಣ ಐ.ಟಿ.ಐ. ಕಾಲೇಜಿನ ಪ್ರಾಚಾರ್ಯ ಎನ್.ಆರ್. ನಾಯ್ಕ, ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ನಾರಾಯಣ ನಾಯ್ಕ, ಕೋಶಾಧ್ಯಕ್ಷ ಶ್ರೀಮಂತ ಮದರಿ ಉಪಸ್ಥಿತರಿದ್ದರು.
ಲೇಖಕಿ ಆಶಾ ದೇಶಭಂಡಾರಿ ಕಾರ್ಯಕ್ರಮ ನಿರೂಪಿಸಿದರು. ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳಿಗೆ ಕನ್ನಡದ ಪುಸ್ತಕ ಹಾಗೂ ಸಿಹಿಯನ್ನು ವಿತರಿಸಲಾಯಿತು