• Slide
  Slide
  Slide
  previous arrow
  next arrow
 • ಸಂಸ್ಕಾರಯುತ ಶಿಕ್ಷಣದಿಂದ ಮಕ್ಕಳ ವ್ಯಕ್ತಿತ್ವ ಪರಿಪೂರ್ಣ; ಸಿ.ವಿ.ಗೋಪಿನಾಥ್

  300x250 AD

  ಯಲ್ಲಾಪುರ: ಎಲ್ಲಾ ವೇದ ಹಾಗೂ ಧರ್ಮಗಳು ಸಾಮಾಜಿಕ ಸಹಬಾಳ್ವೆಯ ವಿಷಯವನ್ನು ಸಾರಿವೆ. ಸತ್ಯ, ಪ್ರಾಮಾಣಿಕತೆ, ಪರೋಪಕಾರ, ರಾಷ್ಟ್ರಪ್ರೇಮ, ಸಾಮಾಜಿಕ ಕಳಕಳಿ ಮೊದಲಾದ ಜೀವನ ಮೌಲ್ಯಗಳನ್ನು ಅಳವಡಿಸಿಕೊಂಡವರು ಉತ್ತಮ ಪ್ರಜೆಯಾಗುತ್ತಾರೆ ಎಂದು ಭಾರತ ಸರ್ಕಾರದ ನಿವೃತ್ತ ಹೆಚ್ಚುವರಿ ಕಾರ್ಯದರ್ಶಿ ಹಾಗೂ ದೆಹಲಿ ಸರ್ಕಾರದ ಮಾಹಿತಿ ಹಾಗೂ ತಂತ್ರಜ್ಞಾನ ವಿಭಾಗದ ನಿವೃತ್ತ ಸಲಹೆಗಾರಾದ ಸಿ ವಿ ಗೋಪಿನಾಥ ಹೇಳಿದರು.

  ಅವರು ಶುಕ್ರವಾರ ವಿಶ್ವದರ್ಶನ ಶಿಕ್ಷಣ ಸಂಸ್ಥೆಯಲ್ಲಿ ವಿಶ್ವದರ್ಶನ ಕರಿಯರ್ ಅಕಾಡೆಮಿ ಹಾಗೂ ವಿಶ್ವದರ್ಶನ ಶಿಕ್ಷಣ ಮಹಾ ವಿದ್ಯಾಲಯ (ಬಿ.ಇಡಿ)ಯ ಪ್ರೇರಣಾ ತರಗತಿ ಉಪನ್ಯಾಸ ಮಾಲಿಕೆ ಅಂಗವಾಗಿ ವಿಶೇಷ ಉಪನ್ಯಾಸ ನೀಡಿ ಪ್ರತಿ ಮಗುವೂ ತಾಯಿಯನ್ನು ಅನುಕರಣೆ ಮಾಡುತ್ತದೆ. ಹೀಗಾಗಿ ಮಕ್ಕಳಿಗೆ ಜೀವನದ ಮೌಲ್ಯಗಳನ್ನು ರೂಡಿಸುವ ಜವಾಬ್ದಾರಿ ಪೋಷಕರ ಮೇಲಿದೆ. ಪೋಷಕರು ರೂಡಿಸಿದ ಮೌಲ್ಯಗಳನ್ನು ಬೆಳೆಸುವ ಹಾಗೂ ತಪ್ಪುಗಳನ್ನು ತಿದ್ದುವ ಹೊಣೆಗಾರಿಕೆ ಶಿಕ್ಷಕರ ಮೇಲಿದೆ ಎಂದು ಅವರು ಹೇಳಿದರು. ಸಮಾಜದ ಶ್ರೇಷ್ಠರು ಸಾಮಾಜಿಕ ಮೌಲ್ಯಗಳನ್ನು ಬಿತ್ತುತ್ತಾರೆ. ಮೌಲ್ಯಗಳು ಮನುಷ್ಯನಲ್ಲಿ ನಿಧಾನವಾಗಿ ಬೇರೂರುತ್ತವೆ. ಅಂತರಾಳದಲ್ಲಿ ಹುದುಗಿರುವ ಸಂಸ್ಕಾರ ಅನೇಕ ಮಜಲುಗಳಾಗಿ ಹೊರಬರುತ್ತದೆ. ಸಂಸ್ಕಾರದ ಮೌಲ್ಯಗಳನ್ನು ಹೆಚ್ಚಿಸಿಕೊಳ್ಳಲು ಪ್ರತಿಯೊಬ್ಬರು ಪ್ರಯತ್ನಿಸಬೇಕು ಎಂದರು. ಪಾಠ ಮಾಡುವ ಶಿಕ್ಷಕರು ಮಕ್ಕಳಿಗೆ ನೈಜ ಘಟನೆ ಆಧಾರಿತ ಭಾವನಾತ್ಮಕ ವಿಷಯಗಳ ಬಗ್ಗೆ ಹೆಚ್ಚು ತಿಳಿಸಬೇಕು. ಪ್ರತಿ ಮಗುವಿಗೂ ಸತ್ಯ, ಪ್ರಾಮಾಣಿಕತೆ, ಪರೋಪಕಾರ, ರಾಷ್ಟ್ರಪ್ರೇಮ, ಸಾಮಾಜಿಕ ಕಳಕಳಿ, ಕಾನೂನು ಗೌರವಿಸುವ ಸಂಸ್ಕಾರಯುತ ಶಿಕ್ಷಣ ನೀಡಬೇಕು. ನಂಬಿಕೆ ಹಾಗೂ ಆತ್ಮ ವಿಶ್ವಾಸ ಹೆಚ್ಚಿಸುವ ವಿಷಯಗಳನ್ನು ಅವರಿಗೆ ತಿಳಿಸಬೇಕು ಎಂದು ಹೇಳಿದರು.

  ಪ್ರತಿಯೊಬ್ಬರು ತಲುಪಬೇಕಾದ ಗುರಿಗಾಗಿ ನಿರಂತರ ಪ್ರಯತ್ನ ನಡೆಸಬೇಕು. ಗುರಿ ತಲುಪಿದ ನಂತರ ತಮ್ಮ ಆದಾಯದ ಒಂದು ಭಾಗವನ್ನು ಸಮಾಜಕ್ಕೆ ಮೀಸಲಿಡಬೇಕು. ಮಾಡಿದ ತಪ್ಪನ್ನು ತಿದ್ದಿಕೊಳ್ಳುವುದನ್ನು ರೂಢಿಸಿಕೊಂಡು ವ್ಯಕ್ತಿತ್ವದಲ್ಲಿ ಪರಿಪೂರ್ಣತೆಯಿಂದ ಇರಬೇಕು. ಸಂಸ್ಕಾರಯುತ ಜೀವನ ಮೌಲ್ಯಗಳನ್ನು ಬೆಳಸಿಕೊಳ್ಳಬೇಕು ಎಂದರು.

  300x250 AD

  ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಶಿಕ್ಷಣ ಪ್ರೇಮಿ ನಾರಾಯಣ ಹೆಗಡೆ ಗಡಿಕೈ ಮಾತನಾಡಿ, ಗಣ್ಯ ವ್ಯಕ್ತಿಗಳ ಸ್ಪೂರ್ತಿದಾಯಕ ಮಾತುಗಳು ಸಾಧನೆಗೆ ಪ್ರೇರಣೆಯಾಗುತ್ತವೆ ಎಂದರು. ಸಂಸ್ಥೆಯ ಕಾರ್ಯದರ್ಶಿಗಳಾದ ನರಸಿಂಹ ಕೋಣೆಮನೆ ಮಾತನಾಡಿ, ಶಿಕ್ಷಣ ಹಾಗೂ ಆರೋಗ್ಯ ಸೇವೆ ವಿಶ್ವದರ್ಶನ ಬದ್ಧವಾಗಿದೆ ಎಂದರು. ಸಂಸ್ಥೆಯ ವ್ಯವಸ್ಥಾಪಕರಾದ ಗುರುರಾಜ ಕುಂದಾಪುರ ಹಾಗೂ ವಿವಿಧ ಅಂಗಸಂಸ್ಥೆಯ ಮುಖ್ಯಸ್ಥರು ಹಾಜರಿದ್ದರು. ವಿಶ್ವದರ್ಶನ ಶಿಕ್ಷಣ ಮಹಾ ವಿದ್ಯಾಲಯದ ಪ್ರಾಚಾರ್ಯರಾದ ಡಾ. ಎಸ್ ಎಲ್ ಭಟ್ಟ ಸ್ವಾಗತಿಸಿದರು. ಪ್ರಶಿಕ್ಷಣಾರ್ಥಿ ಶಿವಪ್ರಸಾದ ಭಟ್ಟ ನಿರ್ವಹಿಸಿದರು.

  Share This
  300x250 AD
  300x250 AD
  300x250 AD
  Leaderboard Ad
  Back to top