ಭಟ್ಕಳ: ಹೊನ್ನಾವರದ ನೂತನ ಬಸ್ ನಿಲ್ದಾಣದ ಉದ್ಘಾಟನೆಗೆ ಆಗಮಿಸಿದ ಸಚಿವ ಶ್ರೀರಾಮುಲು ಗುರುವಾರದಂದು ಬೆಳಿಗ್ಗೆ ಮುರುಡೇಶ್ವರನ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದುಕೊಂಡರು.
ದೇವಸ್ಥಾನಕ್ಕೆ ಭೇಟಿ ನೀಡಿದ ಅವರನ್ನು ದೇವಸ್ಥಾನದ ಆಡಳಿತ ಮಂಡಳಿಯಿಂದ ಶಾಲು ಹೊದಿಸಿ ಸನ್ಮಾನಿಸಿದರು. ಈ ವೇಳೆ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಟಿಕೆಟ್ ವಿಚಾರ ಇನ್ನೂ ನಿರ್ಧಾರವಾಗಿಲ್ಲ. ಚುನಾವಣೆಗೆ ಬಹಳಷ್ಟು ಕಾಲ ಇದೆ. ಬಿಜೆಪಿ ಪಕ್ಷ ಉತ್ತಮವಾಗಿ ಕರ್ನಾಟಕದಲ್ಲಿ ಕೆಲಸ ಮಾಡುತ್ತಿದ್ದು, ರಾಜ್ಯದ ಎಲ್ಲಾ ಬಿಜೆಪಿಯ ಶಾಸಕರು ಕೂಡಾ ಉತ್ತಮವಾಗಿ ಕಾರ್ಯವನ್ನು ಮಾಡುತ್ತಿದ್ದಾರೆ. ಹಾಗಾಗಿ ಇಂತಹ ಸಮಸ್ಯೆ ಉದ್ಭವಿಸುವುದಿಲ್ಲ ಎಂದು ನಾನು ಅಂದುಕೊಂಡಿದ್ದೇನೆ ಎಂದ ಅಭಿಪ್ರಾಯ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಶಾಸಕ ಸುನೀಲ ನಾಯ್ಕ, ಉಪವಿಭಾಗಾಧಿಕಾರಿ ಮಮತಾದೇವಿ ಜಿ.ಎಸ್., ತಹಶೀಲ್ದಾರ್ ಸುಮಂತ್ ಇದ್ದರು.