• Slide
    Slide
    Slide
    previous arrow
    next arrow
  • ಅಮೃತ ಯೋಜನೆ ಸೇರಿದಂತೆ ಒಟ್ಟು 6 ಲಕ್ಷ ಮನೆಗಳನ್ನು ಡಿಸೆಂಬರ್‌ನೊಳಗೆ ಪೂರ್ಣಗೊಳಿಸಲು ಸಿಎಂ ಸೂಚನೆ

    300x250 AD

    ಬೆಂಗಳೂರು: ಅಮೃತ ಯೋಜನೆಯ ಮನೆಗಳನ್ನೂ ಒಳಗೊಂಡಂತೆ ಒಟ್ಟು 6 ಲಕ್ಷ ಮನೆಗಳನ್ನು ಡಿಸೆಂಬರ್ ಒಳಗೆ ಪೂರ್ಣಗೊಳಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು.

    2022-23 ನೇ ಸಾಲಿನ ಆಯವ್ಯಯ ಘೋಷಣೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ವಸತಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯನ್ನು ಗರಿಷ್ಠ ಮೂರು ತಿಂಗಳೊಳಗೆ ಮುಕ್ತಾಯವಾಗಬೇಕು. ಅಂತೆಯೇ ನಿವೇಶನ ಹಂಚಿಕೆ ಸಂಬಂಧ ರಾಜ್ಯದ ವಿವಿಧ ಭಾಗಗಳಲ್ಲಿರುವ ಆಸ್ತಿಗೆ ಆದ್ಯತೆ ಮೇರೆಗೆ ಡಿಪಿಆರ್ ಮಾಡಿ ಸಲ್ಲಿಸಬೇಕು ಎಂದರು.

    1 ಲಕ್ಷ ಬಹುಮಹಡಿ ವಸತಿ ಯೋಜನೆಯಡಿ ಪ್ರಗತಿಯಲ್ಲಿರುವ ಬಹುಮಹಡಿ ಮನೆಗಳ ನಿರ್ಮಾಣ ಕಾಮಗಾರಿಗಳ ಪೈಕಿ 20000 ಮನೆಗಳನ್ನು ಪೂರ್ಣಗೊಳಿಸುವ ಗುರಿ ಇದೆ. 20,000 ಮನೆಗಳನ್ನು ಪೂರ್ಣಗೊಳಿಸಲು ಅನುದಾನವನ್ನು ಹಂತ ಹಂತವಾಗಿ ಅನುದಾನ ಬಿಡುಗಡೆ ಮಾಡುವುದು. ಕೀಲಿ ಕೈ ಹಸ್ತಾಂತರ ಮಾಡುವ ಮುನ್ನ ಷರತ್ತುಗಳನ್ನು ವಿಧಿಸಲಾಗುವುದು ಎಂದರು.
    ಮುಗಿಯುವ ಹಂತದಲ್ಲಿರುವ ಮನೆಗಳನ್ನು ಆದ್ಯತೆ ಮೇರೆಗೆ ಪೂರ್ಣಗೊಳಿಸಿ, ಸಾಲವನ್ನು ಫಲಾನುಭವಿಗಳ ಹೆಸರಿಗೆ ವರ್ಗಾವಣೆ ಮಾಡಿಸಲಾಗುವುದು ಎಂದು‌ ಸಿಎಂ ಬೊಮ್ಮಾಯಿ ಹೇಳಿದ್ದಾರೆ.

    300x250 AD

    Share This
    300x250 AD
    300x250 AD
    300x250 AD
    Leaderboard Ad
    Back to top