ಶಿರಸಿ: ಶಿರಸಿ-ಸಿದ್ದಾಪುರ ಹೆದ್ದಾರಿಯ ನಿಡಗೋಡ ಬಳಿ ಶಿರಸಿಯ ಅಂಬುಲೆನ್ಸ್ ಪಲ್ಟಿಯಾಗಿದೆ.
ಪಂಡಿತ ಸಾರ್ವಜನಿಕ ಆಸ್ಪತ್ರೆಗೆ ಸೇರಿದ ಅಂಬುಲೆನ್ಸ್ ವಾಹನವು ಸಿದ್ದಾಪುರದಿಂದ ಶಿರಸಿ ಕಡೆ ಬರುತ್ತಿದ್ದಾಗ ಘಟನೆ ಸಂಭವಿಸಿದೆ.
ಚಾಲಕನ ನಿಯಂತ್ರಣ ತಪ್ಪಿ ವಾಹನವು ಪಲ್ಟಿಯಾಗಿದ್ದು ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದುಬಂದಿದೆ.