ಮುಂಡಗೋಡ: ಅಪಘಾತವಾಗಿ ನಿಂತಿದ್ದ ಟಿಪ್ಪರ್ ಗೆ ಟೆಂಪೋವೊಂದು ಹಿಂದಿನಿಂದ ಡಿಕ್ಕಿ ಹೊಡೆದ ಘಟನೆ ಮಳಗಿ ಸಮೀಪ ನಡೆದಿದೆ.
ಮಂಗಳವಾರ ಬೆಳಿಗ್ಗೆ ಮಳಗಿ ಸಮೀಪ ಟಿಪ್ಪರ್ ಲಾರಿಯೊಂದು ಆಕಳಿಗೆ ಡಿಕ್ಕಿ ಹೊಡೆದು ರಸ್ತೆ ಬದಿಯಲ್ಲಿ ನಿಂತಿತ್ತು. ಈ ಘಟನೆ ನಡೆದ ಕೆಲವು ಗಂಟೆಗಳ ಬಳಿಕ ಪ್ರಯಾಣಿಕರನ್ನು ಹೊತ್ತಿದ್ದ ಟೆಂಪೋವೊಂದು ನಿಂತಿದ್ದ ಟಿಪ್ಪರ್ ಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ.
ಡಿಕ್ಕಿ ಹೊಡೆದ ಪರಿಣಾಮ ಟೆಂಪೋದಲ್ಲಿದ್ದ ಕಲಘಟಗಿಯ ಎಂಟು ವಿದ್ಯಾರ್ಥಿಗಳಿಗೆ ಹಾಗೂ ಇತರ ಪ್ರಯಾಣಿಕರಿಗೆ ಗಾಯಗಳಾಗಿದ್ದು ಮಳಗಿ ಸರ್ಕಾರಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.