ಭಟ್ಕಳ: ಹೆದ್ದಾರಿಯ ಮೇಲಿನ ಹೊಂಡದಿಂದ ತಪ್ಪಿಸಿಕೊಳ್ಳುವ ಭರದಲ್ಲಿ ನಿಯಂತ್ರಣ ತಪ್ಪಿ ನೆಲಕ್ಕೆ ಬಿದ್ದ ದ್ವಿಚಕ್ರ ವಾಹನ ಸವಾರನ ಮೇಲೆ ಹಿಂದಿನಿಂದ ಬರುತ್ತಿದ್ದ ಗ್ಯಾಸ್ ಟ್ಯಾಂಕರ್ ಚಲಿಸಿದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿರುವ ಘಟನೆ ನಡೆದಿದೆ.
ಮೃತ ವ್ಯಕ್ತಿಯನ್ನು ಪಕ್ಕದ ಶಿರೂರು ಅಡವಿನಕೋಣೆ ನಿವಾಸಿ ಇಕ್ಬಾಲ್ ಮುಲ್ಲಾ (55) ಎಂದು ಗುರುತಿಸಲಾಗಿದೆ. ಶಿರೂರಿನಿಂದ ಭಟ್ಕಳ ಕಡೆಗೆ ಬರುತ್ತಿರುವ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ.
ಶವವನ್ನು ಭಟ್ಕಳ ಸರಕಾರಿ ಆಸ್ಪತ್ರೆ ತಂದು ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಭಟ್ಕಳ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.