
ಮುಂಡಗೋಡ: ತಾಲೂಕಿನಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಗ್ರಾಮೀಣ ಭಾಗದಲ್ಲಿ ಶಾಲೆಯ ಕಟ್ಟಡದ ಗೋಡೆ, ಮೇಲ್ಛಾವಣಿ ಹಾಗೂ ಮನೆಗಳ ಗೋಡೆ ಕುಸಿದು ಬಿದ್ದು ಹಾನಿ ಸಂಭವಿಸಿದ ಘಟನೆ ಗುರುವಾರ ಸಂಭವಿಸಿದೆ.
ತಾಲೂಕಿನ ಹನುಮಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡದ ಮೇಲ್ಛಾವಣಿ ಮತ್ತು ಗೋಡೆ ಕುಸಿದು ಬಿದ್ದು ಹಾನಿಯಾಗಿದೆ. ಹುನಗುಂದ ಗ್ರಾಮದ ರೇಣವ್ವ ಕಣವಿ ಎಂಬುವರ ಮನೆ ಗೋಡೆ ಕುಸಿದು ಬಿದ್ದು ಹಾನಿಯಾಗಿದೆ. ಪಟ್ಟಣದ ಗಾಂಧಿನಗರದ ಮೈಲಾರಲಿಂಗೇಶ್ವರ ದೇವಸ್ಥಾನದ ಹತ್ತಿರವಿರುವ ಮಹಾದೇವಿ ಚನ್ನಯ್ಯಾ ಕಲ್ಮಠ ಎಂಬುವವರ ಮನೆಯ ಗೋಡೆ ಕುಸಿದು ಹಾನಿಯಾಗಿದೆ. ಸ್ಥಳಗಳಿಗೆ ಗ್ರಾಮ ಲೆಕ್ಕಾಧಿಕಾರಿ ಗೋಣಿಬಸಪ್ಪ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿ ವರದಿ ಸಲ್ಲಿಸಿದ್ದಾರೆ.