ಶ್ರೀನಗರ: ಕಾಶ್ಮೀರಿ ಪಂಡಿತ ರಾಹುಲ್ ಭಟ್ ಹತ್ಯೆಯಲ್ಲಿ ಭಾಗಿಯಾಗಿದ್ದ ಇಬ್ಬರು ಉಗ್ರರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿದೆ ಎಂದು ಮೂಲಗಳು ತಿಳಿಸಿವೆ.
ಗುರುವಾರ ಮಧ್ಯಾಹ್ನ ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್ ಜಿಲ್ಲೆಯಲ್ಲಿ ಕಂದಾಯ ಇಲಾಖೆಯ ಉದ್ಯೋಗಿ ರಾಹುಲ್ ಭಟ್ ಅವರನ್ನು ಭಯೋತ್ಪಾದಕರು ಗುಂಡಿಕ್ಕಿ ಕೊಂದಿದ್ದಾರೆ. ‘ಕಾಶ್ಮೀರ ಟೈಗರ್ಸ್’ ಉಗ್ರಗಾಮಿ ಸಂಘಟನೆ ಈ ದಾಳಿಯ ಹೊಣೆ ಹೊತ್ತುಕೊಂಡಿದೆ.
ರಾಹುಲ್ ಭಟ್ ಹತ್ಯೆಯಲ್ಲಿ ಪಾಕ್ ಮೂಲದ ಮತ್ತು ಜಾಗತಿಕವಾಗಿ ನಿಷೇಧಿತ ಜೈಶ್-ಎ-ಮೊಹಮ್ಮದ್‌ಗೆ ಸೇರಿದ ಭಯೋತ್ಪಾದಕರು ಭಾಗಿಯಾಗಿದ್ದಾರೆ ಎಂದು ಶಂಕಿಸಲಾಗಿದೆ.
ಗುಪ್ತಚರ ಮಾಹಿತಿಯ ಪ್ರಕಾರ, ಜೈಶ್-ಎ-ಮೊಹಮ್ಮದ್ ಗುಂಪು ಭಯೋತ್ಪಾದನೆಯ ಸಂಚು ಹೆಣೆಯಲು ಅಲ್ಪಸಂಖ್ಯಾತ ಸಮುದಾಯದ ವಿರುದ್ಧ ದಾಳಿ ನಡೆಸುತ್ತಿದೆ. ಅದು ಕಾಶ್ಮೀರಿ ಪಂಡಿತರನ್ನು ಮತ್ತು ಹಿಂದೂ, ಸಿಖ್‌ರನ್ನು ಹೆಚ್ಚಾಗಿ ದಾಳಿಗೆ ಗುರಿ ಪಡಿಸುತ್ತಿದೆ.