ಯಲ್ಲಾಪುರ: ಕ್ಷೇತ್ರದ ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ಧಿಗಾಗಿ 22.60 ಕೋಟಿ ರೂಪಾಯಿ ವಿಶೇಷ ಅನುದಾನ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಪ್ರಯತ್ನದಿಂದಾಗಿ ಮಂಜೂರಾಗಿದೆ.
ಕ್ಷೇತ್ರದ ಗ್ರಾಮೀಣ ಭಾಗದ ರಸ್ತೆಗಳ ಹಾಗೂ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಮೊದಲ ಆದ್ಯತೆಯನ್ನು ನೀಡುವ ನಿಟ್ಟಿನಲ್ಲಿ ಲೋಕೋಪಯೋಗಿ ಇಲಾಖೆ ಮೂಲಕವಾಗಿ ಕ್ಷೇತ್ರದ ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ಧಿಗಾಗಿ 22.60 ಕೋಟಿ ರೂಪಾಯಿ ವಿಶೇಷ ಅನುದಾನದ ಮಂಜೂರಾಗಿದ್ದು ಕಾಮಗಾರಿಗಳಿಗೆ ಟೆಂಡರ್ ಪ್ರಕ್ರಿಯೆಯನ್ನು ಪ್ರಾರಂಭಿಸಿ ಶೀಘ್ರದಲ್ಲೇ ಅಭಿವೃದ್ಧಿ ಕಾರ್ಯಕ್ಕೆ ಚಾಲನೆ ನೀಡಲಾಗುವುದು ಪ್ರಕಟಣೆ ತಿಳಿಸಿದೆ.