ಕಾರವಾರ: ತಾಲೂಕಿನ ದೇವಳಮಕ್ಕಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಬರ್ಗಲ್ ಬಳಿ ವೇಗವಾಗಿ ಬಂದ ಕಾರೊಂದು ಕರೆಂಟ್ ಕಂಬಕ್ಕೆ ಡಿಕ್ಕಿ ಹೊಡೆದು ಚಾಲಕ ಮೃತಪಟ್ಟ ದುರ್ಘಟನೆ ನಡೆದಿದೆ.
ಕಾರವಾರದ ಕಡೆಗೆ ಬರುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದ್ದು ಚಾಲಕನ ತಲೆ ಹಾಗೂ ತೀವ್ರತರನಾದ ಪೆಟ್ಟು ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತ ಪಟ್ಟಿದ್ದಾನೆ.
ಕಾರವಾರದ ಖಾರ್ಗೆಜೂಗದ ರೋಷನ್ ನಾಯ್ಕ್ ಮೃತ ದುರ್ದೈವಿಯಾಗಿದ್ದು ಮಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.