ಶಿರಸಿ: ಜಿಲ್ಲೆಯಲ್ಲಿ ಪಕ್ಷದ ಸದಸ್ಯತ್ವ ನೋಂದಣಿ ಯಶಸ್ವಿಯಾಗಿ ನಡೆದಿದ್ದು, ಸದಸ್ಯತ್ವ ನೋಂದಣಿಯಲ್ಲಿ ಪಾಲ್ಗೊಂಡ ಎಲ್ಲರನ್ನು ಅಭಿನಂದಿಸುತ್ತೇನೆ ಹಾಗೂ ಮುಂಬರುವ ಶಿಕ್ಷಕರ ಕ್ಷೇತ್ರದ ಚುನಾವಣೆಯನ್ನು ಜಿಲ್ಲಾ ಕಾಂಗ್ರೆಸ್ ಗಂಭೀರವಾಗಿ ಸ್ವೀಕರಿಸಿ ಎರಿದುಸುತ್ತೇವೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ನಾಯ್ಕ್ ಹೇಳಿದರು.
ಜಿಲ್ಲಾ ಸಮಿತಿ ಕಾರ್ಯಲಯದಲ್ಲಿ ಜಿಲ್ಲಾ ಕಾರ್ಯಕಾರಿ ಮಂಡಳಿ ಸಭೆಯಲ್ಲಿ ಅವರು ಮಾತನಾಡಿದರು. ಸಭೆಯಲ್ಲಿ ಪಕ್ಷದ ಆಂತರಿಕ ಚುನಾವಣೆ ಕುರಿತು ಚರ್ಚೆಸಲಾಯಿತು ಮತ್ತು ಮುಂಬರುವ ಪಶ್ಚಿಮ ಶಿಕ್ಷಕರ ಕ್ಷೇತ್ರದ ಚುನಾವಣೆಯ ಪ್ರಚಾರದ ಸಿದ್ಧತೆ ಮತ್ತು ಜವಾಬ್ದಾರಿ ಕುರಿತು ಚರ್ಚಿಸಿ ಪಕ್ಷ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿ ಪ್ರತಿಯೊಬ್ಬ ಪದಾಧಿಕಾರಿಯೂ ಜವಾಬ್ದಾರಿ ಇಂದ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಳುವಂತೆ ವಿನಂತಿಸಲಾಯಿತು.
ಈ ಸಭೆಯಲ್ಲಿ ಕೆಪಿಸಿಸಿ ಪ್ರಶಾಂತ್ ದೇಶಪಾಂಡೆ, ಪಶ್ಚಿಮ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಬಸವರಾಜ್ ಗುರಿಕಾರ, ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು, ಬ್ಲಾಕ್ ಅಧ್ಯಕ್ಷರು, ವಿವಿಧ ಸೆಲ್ ಪದಾಧಿಕಾರಿಗಳು ಭಾಗವಹಿಸಿದ್ದರು.