ನವದೆಹಲಿ: ಥಾಮಸ್ ಕಪ್ 2022ರಲ್ಲಿ ಭಾರತೀಯ ಪುರುಷರ ಬ್ಯಾಡ್ಮಿಂಟನ್ ತಂಡವು ಇಂಡೋನೇಷ್ಯಾವನ್ನು 3-0 ಅಂತರದಿಂದ ಸೋಲಿಸಿ ಐತಿಹಾಸಿಕ ಚಿನ್ನದ ಪದಕವನ್ನು ಜಯಿಸಿದೆ.
ಥಾಯ್ಲೆಂಡ್‌ನ ಬ್ಯಾಂಕಾಕ್‌ನ ಇಂಪ್ಯಾಕ್ಟ್ ಅರೆನಾದಲ್ಲಿ ನಡೆದ ಥಾಮಸ್ ಕಪ್ 2022 ರ ಫೈನಲ್‌ನಲ್ಲಿ ಭಾರತ ಪುರುಷರ ಬ್ಯಾಡ್ಮಿಂಟನ್ ತಂಡವು 14 ಬಾರಿ ವಿಜೇತರಾದ ಇಂಡೋನೇಷ್ಯಾವನ್ನು 3-0 ಅಂತರದಿಂದ ಸೋಲಿಸಿ ಭಾನುವಾರ ಇತಿಹಾಸವನ್ನು ಸೃಷ್ಟಿಸಿತು.
ಇದರೊಂದಿಗೆ ಭಾರತ ಥಾಮಸ್ ಕಪ್ ಚಾಂಪಿಯನ್ ಪಟ್ಟ ಅಲಂಕರಿಸಿದ ಆರನೇ ರಾಷ್ಟ್ರವಾಯಿತು.
ಲಕ್ಷ್ಯ ಸೇನ್, ಕಿಡಂಬಿ ಶ್ರೀಕಾಂತ್ ಮತ್ತು ಡಬಲ್ಸ್ ಜೋಡಿ ಸಾತ್ವಿಕ್‌ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಅವರು ಇತಿಹಾಸ ನಿರ್ಮಾಣಕ್ಕೆ ಕಾರಣರಾಗಿದ್ದಾರೆ.
ಆಟಗಾರರ ಸಾಧನೆಯನ್ನು ಪ್ರಧಾನಿ ನರೇಂದ್ರ ಮೋದಿ ಟ್ವಿಟ್ ಮೂಲಕ ಕೊಂಡಾಡಿದ್ದಾರೆ. “ಭಾರತ ಬ್ಯಾಡ್ಮಿಂಟನ್ ತಂಡ ಇತಿಹಾಸ ಬರೆದಿದೆ. ಥೋಮಸ್ ಕಪ್ ಗೆದ್ದ ಭಾರತೀಯ ಆಟಗಾರರಿಂದ ಇಡೀ ದೇಶವೇ ಸಂಭ್ರಮಿಸಿದೆ. ನಮ್ಮ ನಿಪುಣ ತಂಡಕ್ಕೆ ಅಭಿನಂದನೆಗಳು ಮತ್ತು ಅವರ ಮುಂದಿನ ಪ್ರಯತ್ನಗಳಿಗಾಗಿ ಅವರಿಗೆ ಶುಭಾಶಯಗಳು. ಈ ಗೆಲುವು ಮುಂಬರುವ ಹಲವು ಕ್ರೀಡಾಪಟುಗಳಿಗೆ ಪ್ರೇರಣೆ ನೀಡಲಿದೆ” ಎಂದಿದ್ದಾರೆ