• first
    second
    third
    previous arrow
    next arrow
  • ಪ್ರಬಂಧ ಸ್ಪರ್ಧೆ; ವಿನಾಯಕ್ ಪಟಗಾರ್ ಗೆ ಮೂರನೇ ಸ್ಥಾನ

    300x250 AD

    ಹೊನ್ನಾವರ:ರಾಜ್ಯ ಸರಕಾರಿ ನೌಕರರ ಸಂಘ, ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕನ್ನಡ ಗಡಿನಾಡು ಅಭಿವೃದ್ಧಿ ಪ್ರಾಧಿಕಾರ ಇವರ ಸಹಯೋಗದಲ್ಲಿ ನಡೆದ ಗಡಿನಾಡ ಕನ್ನಡ ಉತ್ಸವ ನಡೆಸಿದ ಪ್ರಬಂಧ ಸ್ಪರ್ಧೆಯಲ್ಲಿ ತಾಲೂಕು ಆಸ್ಪತ್ರೆಯಲ್ಲಿ ಐ.ಸಿ.ಟಿ.ಸಿ ಆಪ್ತಸಮಾಲೋಚಕರಾಗಿ ಕಾರ್ಯನಿರ್ವಹಿಸುತ್ತಿರುವ ವಿನಾಯಕ ಪಟಗಾರ ಇವರಿಗೆ ಮೂರನೇ ಸ್ಥಾನ ಲಭಿಸಿದೆ.

    ‘ಕಾರವಾರ ಪ್ರವಾಸಿಗರ ನಿತ್ಯ ಸ್ವರ್ಗ’ ವಿಷಯದ ಕುರಿತು ಪ್ರಬಂಧ ಸ್ಪರ್ಧೆ ನಡೆಸಲಾಗಿತ್ತು. ಗಡಿನಾಡು ಕನ್ನಡ ಉತ್ಸವ ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ರಾಜ್ಯ ಸರಕಾರಿ ನೌಕರರ ರಾಜ್ಯಾಧ್ಯಕ್ಷರಾದ ಸಿ.ಎಸ್.ಷಡಾಕ್ಷರಿ ಅವರಿಂದ ಪ್ರಮಾಣ ಪತ್ರ, ನಗದು ಬಹುಮಾನ ಸ್ವೀಕರಿಸಿದರು. ವಿನಾಯಕ ಪಟಗಾರವರ ಈ ಪ್ರಶಸ್ತಿ ಲಭಿಸಿರುವದಕ್ಕೆ ತಾಲೂಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ರಾಜೇಶ ಕಿಣಿ ಸೇರಿದಂತೆ ಎಲ್ಲ ವೈದ್ಯಾಧಿಕಾರಿಗಳು, ಸಮಸ್ತ ಸಿಬ್ಬಂದಿ ವರ್ಗ ಹಾಗೂ ತಾಲೂಕಾ ರಾಜ್ಯ ಸರಕಾರಿ ನೌಕರರ ಸಂಘದ ಉಪಾಧ್ಯಕ್ಷ ಚಂದ್ರಶೇಖರ ಕಳಸ ಅವರು ಅಭಿನಂದನೆ ಸಲ್ಲಿಸಿದ್ದಾರೆ.

    300x250 AD
    Share This
    300x250 AD
    300x250 AD
    300x250 AD
    Back to top