ಶಿರಸಿ : ತಾಲೂಕಿನ ಭೈರುಂಬೆಯ ಶ್ರೀ ಶಾರದಾಂಬಾ ಆಂಗ್ಲಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿನಿ ಕುಮಾರಿ ದೀಪಿಕಾ ಹೆಗಡೆ ಹಕ್ಕಿಮನೆ ರಾಷ್ಟ್ರೋತ್ಥಾನ ಪರಿಷತ್ ಸಾಧನಾಕ್ಕೆ ಆಯ್ಕೆಯಾಗಿದ್ದಾಳೆ.
ರಾಷ್ಟ್ರೋತ್ಥಾನ ಪರಿಷತ್ ಉಚಿತ ಪದವಿಪೂರ್ವ ಶಿಕ್ಷಣ ಪ್ರವೇಶ ಪರೀಕ್ಷೆಯನ್ನು (ಸಾಧನಾ )ಹತ್ತನೇಯ ತರಗತಿಯ ಮಕ್ಕಳಿಗಾಗಿ ರಾಜ್ಯಮಟ್ಟದಲ್ಲಿ ನಡೆಸಿದ್ದು ಪರೀಕ್ಷೆ ಬರೆದ 5000 ವಿದ್ಯಾರ್ಥಿಗಳಲ್ಲಿ 45 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ.
ರಾಜ್ಯಮಟ್ಟದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಶೋಧಿಸಿ ವಸತಿ ಹಾಗೂ ಗುಣಮಟ್ಟದ ಶಿಕ್ಷಣವನ್ನು ಉಚಿತವಾಗಿ ನೀಡಿ ಸಂಸ್ಕಾರಯುತ ಸಮಾಜದ ನಿರ್ಮಾಣ ಮಾಡುವುದು ರಾಷ್ಟ್ರೋತ್ಥಾನ ಪರಿಷತ್ತಿನ ಹಂಬಲವಾಗಿದೆ.
ರಾಷ್ಟ್ರೋತ್ಥಾನಕ್ಕೆ ಆಯ್ಕೆಯಾಗಿರುವ ವಿದ್ಯಾರ್ಥಿನಿ ದೀಪಿಕಾಳ ಭವಿಷ್ಯ ಉಜ್ವಲವಾಗಲೆಂದು ಶಾಲಾ ಆಡಳಿತ ಮಂಡಳಿ, ಪಾಲಕರು, ಪೋಷಕರು ಶುಭ ಹಾರೈಸಿದ್ದಾರೆ.