ನವದೆಹಲಿ: ಸಾಂಕ್ರಾಮಿಕ ರೋಗದ ಹೊರತಾಗಿಯೂ, ದೇಶದ ಕೃಷಿ ಕ್ಷೇತ್ರವು 3.9% ಬೆಳವಣಿಗೆ ದರವನ್ನು ದಾಖಲಿಸಿದೆ. ಭಾರತ ಸರ್ಕಾರದ ಕೃಷಿ ಸ್ನೇಹಿ ನೀತಿಗಳು ಮತ್ತು ರೈತ ಸಮುದಾಯದ ಶ್ರಮದಿಂದಾಗಿ ಇದು ಸಾಧ್ಯವಾಗಿದೆ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ.
ಭುವನೇಶ್ವರದಲ್ಲಿ ಕೃಷಿ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಕೃಷಿ ಸಚಿವರು, ದೇಶದ ಕೃಷಿ ರಫ್ತು ಕೂಡ ನಾಲ್ಕು ಲಕ್ಷ ಕೋಟಿ ಗಡಿಯನ್ನು ಮುಟ್ಟಿರುವುದು ಗಮನಾರ್ಹ ಸಾಧನೆಯಾಗಿದೆ ಎಂದರು.
ದೇಶದ ಅರ್ಧದಷ್ಟು ಜನಸಂಖ್ಯೆಯು ಕೃಷಿಯ ಅವಲಂಬಿತವಾಗಿದೆ ಎಂಬ ಅಂಶವನ್ನು ಎತ್ತಿ ತೋರಿಸಿದ ಅವರು, ಕೃಷಿ ಮತ್ತು ಅದಕ್ಕೆ ಸಂಬಂಧಿಸಿದ ವಲಯದಲ್ಲಿ ಉದ್ಯೋಗ ಸೃಷ್ಟಿಯ ಅಗತ್ಯವಿದೆ ಎಂದಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ದೂರದೃಷ್ಟಿಯ ನಾಯಕತ್ವದಲ್ಲಿ ಸರ್ಕಾರವು ಉತ್ಪಾದನೆಯನ್ನು ಮಾತ್ರವಲ್ಲದೆ ಕೃಷಿ ಮತ್ತು ಸಂಬಂಧಿತ ವಲಯದ ಉತ್ಪಾದಕತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಹೆಚ್ಚಿನ ಹೂಡಿಕೆ, ಮೂಲಸೌಕರ್ಯ ಸೃಷ್ಟಿ ಮತ್ತು ತಂತ್ರಜ್ಞಾನದ ಹಸ್ತಕ್ಷೇಪದ ಮೂಲಕ ಕೆಲಸ ಮಾಡುತ್ತಿದೆ ಎಂದು ಅವರು ಹೇಳಿದರು.
ರೈತರಿಗೆ ಲಾಭದಾಯಕ ಬೆಲೆಗಳು, ಮಾರುಕಟ್ಟೆ ಸಂಪರ್ಕಗಳು ಮತ್ತು ದೇಶದ ಕೃಷಿ ಉತ್ಪನ್ನಗಳ ರಫ್ತು ಸಾಮರ್ಥ್ಯವನ್ನು ಖಾತ್ರಿಪಡಿಸುವ ಜೊತೆಗೆ ಕೃಷಿ ಉತ್ಪನ್ನಗಳ ಗುಣಮಟ್ಟವನ್ನು ಹೆಚ್ಚಿಸುವ ಗುರಿಯೊಂದಿಗೆ ಸರ್ಕಾರವು ಹಲವಾರು ಕ್ರಮಗಳನ್ನು ಪ್ರಾರಂಭಿಸಿದೆ ಎಂದು ಸಚಿವರು ಹೇಳಿದರು.