ಶಿರಸಿ:ತಾಲೂಕಿನ ಸೋಂದಾದಲ್ಲಿ ಶ್ರೀ ನಂದಿಕೇಶ್ವರ ದೇವರ ಮೂರ್ತಿಯ ಪುನರ್ ಪ್ರತಿಷ್ಠಾಪನೆ ಮತ್ತು ಕಳಸಾರೋಹಣ ಕಾರ್ಯಕ್ರಮದಲ್ಲಿ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಭಾಗವಹಿಸಿ ಶ್ರೀ ದೇವರ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಪರಮಪೂಜ್ಯನೀಯ ಶ್ರೀ ಶ್ರೀಮದ್ ಉಜ್ಜಯಿನಿ ಸದ್ಧರ್ಮ ಸಿಂಹಾಸನಾಧೀಶ್ವರ ಶ್ರೀ ಶ್ರೀ 1008 ಜಗದ್ಗುರು ಸಿದ್ಧಲಿಂಗ ರಾಜದೇಶಿ ಕೇಂದ್ರ ಶಿವಾಚಾರ್ಯ ಭಗವತ್ಪಾದ ಮಹಾಸ್ವಾಮಿಗಳು, ಪರಮಪೂಜ್ಯ ಶ್ರೀ ಸೋಂದಾ ಸ್ವರ್ಣವಲ್ಲಿ ಮಠಾಧೀಶರಾದ ಶ್ರೀ ಶ್ರೀಮದ್ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮೀಜಿಗಳು ಮತ್ತು ಸೋಂದಾ ಜೈನಠದ ಪರಮಪೂಜ್ಯ ಸ್ವಸ್ತಿಶ್ರೀ ಜಗದ್ಗುರು ಅಕಲಂಕಕೇಸರಿ ಭಟ್ಟಾಕಲಂಕ ಮಹಾಸ್ವಾಮಿಗಳು ದಿವ್ಯ ಸಾನಿದ್ಯ ವಹಿಸಿದ್ದರು. ಇತರ ಪೂಜ್ಯನೀಯ ಸ್ವಾಮೀಜಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.