ಕುಮಟಾ: ತಾಲೂಕಿನ ಬರ್ಗಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಂ1 ರಲ್ಲಿ ಇತ್ತಿಚೆಗೆ ಅಳವಡಿಸಿದ್ದ ಸಿ.ಸಿ. ಟಿವಿ ಕ್ಯಾಮೆರಾ ಕದ್ದೊಯ್ದ ಪ್ರಕರಣವನ್ನು ಪೊಲೀಸರು ಬೇಧಿಸಿದ್ದು, ಓರ್ವ ಯುವಕನನ್ನು ಬಂಧಿಸುವಲ್ಲಿ ಗೋಕರ್ಣ ಪೊಲೀಸರು ಯಶಸ್ವಿಯಾಗಿದ್ದಾರೆ. ತಾಲೂಕಿನ ಬರ್ಗಿ ಸಮೀಪದ ಕುರಿಗದ್ದೆಯ ಮನೋಜ ಗಣೇಶ ಪಟಗಾರ (19) ಬಂಧಿತ ಆರೋಪಿ ಎಂದು ತಿಳಿದುಬಂದಿದ್ದು ಇನ್ನಿಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.
ಕಳ್ಳತನ ಪ್ರಕರಣ ದಾಖಲಿಸಿಕೊಂಡ ಗೋಕರ್ಣ ಠಾಣೆ ಪೊಲೀಸರು ತನಿಖೆ ಕೈಗೊಂಡು ಪೇಂಟಿಂಗ್ ಕೆಲಸ ಮಾಡುತ್ತಿದ್ದ ಕುರಿಗದ್ದೆಯ ಮನೋಜ ಪಟಗಾರ ಅವರನ್ನು ಬಂಧಿಸಿ, ಸಿ.ಸಿ ಕ್ಯಾಮೆರಾಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಲಾಗಿದೆ.