Slide
Slide
Slide
previous arrow
next arrow

ಮತಾಂತರ ನಿಷೇಧ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ

300x250 AD

ಬೆಂಗಳೂರು: ಬಲವಂತದ ಮತ್ತು ಆಮಿಷದ ಮತಾಂತರವನ್ನು ತಡೆಯುವ ನಿಟ್ಟಿನಲ್ಲಿ ರಾಜ್ಯ ಸರಕಾರ ರಚಿಸಿರುವ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ (ಮತಾಂತರ ನಿಷೇಧ) ಸುಗ್ರೀವಾಜ್ಞೆಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಮೇ. ೧೭,ಮಂಗಳವಾರ ಅಂಕಿತ ಹಾಕಿದ್ದಾರೆ.

ಕಳೆದ ಡಿಸೆಂಬರ್ ತಿಂಗಳಲ್ಲಿ ಬೆಳಗಾವಿಯಲ್ಲಿ ನಡೆದ ವಿಧಾನಮಂಡಲ ಅಧಿವೇಶನದ ಸಂದರ್ಭದಲ್ಲಿ ಮತಾಂತರ ನಿಷೇಧ ಮಸೂದೆಯನ್ನು ವಿಧಾನ ಸಭೆಯಲ್ಲಿ ಮಂಡಿಸಿ ಒಪ್ಪಿಗೆ ಪಡೆಯಲಾಗಿತ್ತು. ಆದರೆ ಈ ಮಸೂದೆಯನ್ನು ವಿಧಾನ ಪರಿಷತ್ತಿನಲ್ಲಿ ಅಂಗೀಕರಿಸಲು ಸಾಧ್ಯವಾಗಿರಲಿಲ್ಲ.

ಹೀಗಾಗಿ ರಾಜ್ಯ ಸರ್ಕಾರವು ವಿಧಾನಸಭೆಯ ಅಂಗೀಕಾರ ಪಡೆದಿರುವ ಸ್ವರೂಪದಲ್ಲಿ ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೊಳಿಸಲು ಮೇ 12ರಂದು ನಡೆದ ಸಂಪುಟ ಸಭೆಯಲ್ಲಿ ನಿರ್ಧರಿಸಿತ್ತು.

300x250 AD

ಮಂಗಳವಾರ ರಾಜ್ಯಪಾಲರು ಸಂಸದೀಯ ವ್ಯವಹಾರಗಳು ಮತ್ತು ಕಾನೂನು ಇಲಾಖೆಯು ರವಾನಿಸಿದ್ದ ಸುಗ್ರೀವಾಜ್ಞೆಗೆ ಅಂಕಿತ ಹಾಕಿದ್ದಾರೆ. ನಾಳೆಯಿಂದಲೇ ಸುಗ್ರೀವಾಜ್ಞೆ ಜಾರಿಗೆ ಬರಲಿದೆ.

ಇದರ ಅನ್ವಯ ಬಲವಂತ ಅಥವಾ ಆಮಿಷವೊಡ್ಡಿ ಮತಾಂತರ ಮಾಡುವವರಿಗೆ 10 ವರ್ಷಗಳವರೆಗೆ ಜೈಲು ಶಿಕ್ಷೆಯನ್ನು ವಿಧಿಸಲಾಗುತ್ತದೆ

Share This
300x250 AD
300x250 AD
300x250 AD
Back to top