ಯಲ್ಲಾಪುರ:ತಾಲೂಕಿನ ಹಿತ್ಲಳ್ಳಿಯ ವ್ಯವಸಾಯ ಸೇವಾ ಸಹಕಾರಿ ಸಂಘದ ಸಭಾಂಗಣದಲ್ಲಿ ಹಿತ್ತಳ್ಳಿ ಶಕ್ತಿ ಕೇಂದ್ರದ ವ್ಯಾಪ್ತಿಯ ಕಾರ್ಯಕರ್ತರ ಸಭೆಯನ್ನು ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ್ ಪಕ್ಷದ ಪದಾಧಿಕಾರಿಗಳು ಮತ್ತು ಮುಖಂಡರ ಜೊತೆಗೂಡಿ ನಡೆಸಿದರು.
ಕಾರ್ಯಕರ್ತರು, ಗ್ರಾಮ ಪಂಚಾಯತ ಸದಸ್ಯರು ಹಾಗೂ ಸ್ಥಳೀಯ ಮುಖಂಡರೊಂದಿಗೆ ಗ್ರಾಮದ ಅಭಿವೃದ್ಧಿ ಯೋಜನೆಗಳ ಕುರಿತು ಚರ್ಚಿಸಿದರು. ಹಿತ್ತಳ್ಳಿ ಶಕ್ತಿ ಕೇಂದ್ರದ ವ್ಯಾಪ್ತಿಯಲ್ಲಿ ಪಕ್ಷದ ಬಲವರ್ಧನೆಗೆ ಕೈಗೊಳ್ಳಬೇಕಾಗಿರುವ ಕ್ರಮಗಳ ಕುರಿತು ಚರ್ಚಿಸಿ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.
ಈ ಸಂದರ್ಭದಲ್ಲಿ ಮಂಡಲಾಧ್ಯಕ್ಷ ಗೋಪಾಲಕೃಷ್ಣ ಎನ್ ಗಾಂವರ್,ಯುವ ನಾಯಕರಾದ ವಿವೇಕ್ ಹೆಬ್ಬಾರ್, ಪ್ರಧಾನ ಕಾರ್ಯದರ್ಶಿಗಳಾದ ಡಾ. ರವಿ ಭಟ್ ಬರಗದ್ದೆ, ಪ್ರಸಾದ ಹೆಗಡೆ, ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ದತ್ತು ನಾಯ್ಕ, ಪ್ರಧಾನ ಕಾರ್ಯದರ್ಶಿ ನಾಗರಾಜ ಕವಡಿಕೆರೆ, ಗ್ರಾಮ ಪಂಚಾಯತ ಅಧ್ಯಕ್ಷರಾದ ಪ್ರಸನ್ನ ಭಟ್, ಶಕ್ತಿ ಕೇಂದ್ರ ಅಧ್ಯಕ್ಷರಾದ ಬಾಬಣ್ಣ ಪತ್ರೇಕರ್, ಎಸ್.ಸಿ. ಮೋರ್ಚಾ ಅಧ್ಯಕ್ಷರಾದ ರಾಜೇಶ ಉಪ್ಪಾರ ಹಾಗೂ ಗ್ರಾಮ ಪಂಚಾಯತ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.