ಕಾರವಾರ: ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆ ಹಳಿಯಾಳ ಹಾಗೂ ಜೆಸಿಬಿ ಇಂಡಿಯಾ ಇವರ ಜಂಟಿ ಸಹಯೋಗದಲ್ಲಿ 30 ದಿನಗಳ ಜೆಸಿಬಿ ಚಾಲನಾ ಉಚಿತ ತರಬೇತಿಯನ್ನು ಹಮ್ಮಿಕೊಳ್ಳಲಾಗುತ್ತಿದೆ.
ತರಬೇತಿಯನ್ನು ಉಚಿತ ಊಟ ವಸತಿಯೊಂದಿಗೆ ನೀಡಲಾಗುವುದು. 18ರಿಂದ 45ರ ವರ್ಷದೊಳಗಿನ ಆಸಕ್ತ ಯುವಕರು ಹೆಸರು, ಹುಟ್ಟಿದ ದಿನಾಂಕ, ಪೂರ್ಣ ಪೋಸ್ಟಲ್ ವಿಳಾಸ, ಮೊಬೈಲ್ ಸಂಖ್ಯೆ, ವಿದ್ಯಾರ್ಹತೆ, ತರಬೇತಿಯ ಅವಶ್ಯಕತೆ, ಈಗ ಮಾಡುತ್ತಿರುವ ಕೆಲಸ, ಇತ್ಯಾದಿ ವಿವರಗಳನ್ನೊಳಗೊಂಡ ಅರ್ಜಿಯನ್ನು ಮೇ.25 ರೊಳಗೆ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ವಿಸ್ತರಣಾ ಕೇಂದ್ರ ಹಸನಮಾಳ್, ದಾಂಡೇಲಿ ವಿಳಾಸಕ್ಕೆ ಸಲ್ಲಿಸಲು ಕೋರಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಹಳಿಯಾಳ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆಯನ್ನು ಅಥವಾ ದೂರವಾಣಿ ಸಂಖ್ಯೆ: 08284- 298547, ಮೊಬೈಲ್ ಸಂಖ್ಯೆ: 80507 41744, 63634 29889, 94497 82425ಗೆ ಸಂಪರ್ಕಿಸಿ ಎಂದು ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆಯ ನಿರ್ದೇಶಕ ಪ್ರಸನ್ನಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.