• first
  second
  third
  previous arrow
  next arrow
 • ಮೇ.21ಕ್ಕೆ ಶಿರಸಿಯಲ್ಲಿ ವಿಪ್ರ ಸಮಾವೇಶ

  300x250 AD

  ಶಿರಸಿ: “ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ” ಬೆಂಗಳೂರು,ಇದರ ಆಶ್ರಯದಲ್ಲಿ ಶಿರಸಿಯಲ್ಲಿ ವಿಪ್ರ ಸಮಾವೇಶವನ್ನು ಸಂಘಟಿಸಲಾಗಿದೆ. ಮೆ.21, ಶನಿವಾರದಂದು ಮಧ್ಯಾಹ್ನ 3.30 ಘಂಟೆಗೆ ಶಿರಸಿಯ ಟಿ.ಆರ್.ಸಿ ಬ್ಯಾಂಕ್ ಸಭಾಂಗಣದಲ್ಲಿ ಜರುಗುವ ಸಮಾವೇಶದ ಘನ ಅಧ್ಯಕ್ಷತೆಯನ್ನು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಅಶೋಕ ಹಾರ್ನಳ್ಳಿ ವಹಿಸಿಕೊಳ್ಳಲಿದ್ದಾರೆ.

  ಮುಖ್ಯ ಅತಿಥಿಗಳಾಗಿ ಕರ್ನಾಟಕ ವಿಧಾನಸಭೆಯ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಕರ್ನಾಟಕ ಸರ್ಕಾರದ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ, ಹಳಿಯಾಳ ವಿಧಾನಸಭಾ ಕ್ಷೇತ್ರದ ಶಾಸಕ ಆರ್.ವಿ.ದೇಶಪಾಂಡೆ, ವಿಶ್ವವಾಣಿ ಹಾಗೂ ಲೋಕಧ್ವನಿ ಪತ್ರಿಕೆಗಳ ಸಂಪಾದಕ ವಿಶ್ವೇಶ್ವರ ಭಟ್, ಕರ್ನಾಟಕ ಸರ್ಕಾರದ ಪಂಚಾಯತರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆಯ ಉಪಾಧ್ಯಕ್ಷ ಪ್ರಮೋದ ಹೆಗಡೆ ಪಾಲ್ಗೊಳ್ಳಲಿದ್ದಾರೆ.

  ಶ್ರೀಸ್ವರ್ಣವಲ್ಲಿ ಮಹಾಸಂಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ವಿ.ಎನ್.ಹೆಗಡೆ ಬೊಮ್ಮನಳ್ಳಿ, ಟಿಎಸ್‍ಎಸ್ ಕಾರ್ಯಾಧ್ಯಕ್ಷ ರಾಮಕೃಷ್ಣ ಹೆಗಡೆ ಕಡವೆ, ಶ್ರೀರಾಮಚಂದ್ರಾಪುರಮಠ ಹವ್ಯಕ ಮಹಾಮಂಡಲದ ಅಧ್ಯಕ್ಷ ಆರ್.ಎಸ್.ಹೆಗಡೆ ಹರಗಿ ಸೇರಿದಂತೆ ಸಮಾಜದ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿರುತ್ತಾರೆ.

  300x250 AD

  ಮಹಾಸಭೆಯ ಸಂಘಟನೆಗೆ ಉತ್ತರಕನ್ನಡ ಜಿಲ್ಲೆಯಲ್ಲೂ ಹೆಚ್ಚಿನ ಒತ್ತು ನೀಡಲಾಗಿದ್ದು ಈ ನಿಟ್ಟಿನಲ್ಲಿ ಈಗಾಗಲೇ ಸದಸ್ಯತ್ವ ಹಾಗೂ ಸಂಘಟನೆಗೆ ಚಾಲನೆ ನೀಡಲಾಗಿದೆ.ಬ್ರಾಹ್ಮಣ ಸಮಾಜದ ಸಂಘಟನೆಯ ಅಗತ್ಯತೆ, ಕುಂದುಕೊರತೆಗಳ ನಿವಾರಣೆಗೆ ಮಾರ್ಗದರ್ಶನ, ಬ್ರಾಹ್ಮಣ್ಯದ ಅಸ್ತಿತ್ವವನ್ನು ಕಾಯ್ದುಕೊಂಡು ಸಮಾಜದ ಶ್ರೇಯೋಭಿವೃದ್ಧಿಗೆ ಕೈಜೋಡಿಸುವಿಕೆ ಸೇರಿದಂತೆ ಹತ್ತು ಹಲವು ಪ್ರಮುಖ ಸಮಾಜಮುಖಿ ವಿಚಾರಗಳ ಕುರಿತು ಈ ಅಪರೂಪದ ವಿಪ್ರಸಮಾವೇಶ ದಿಕ್ಸೂಚಿಯಾಗಲಿದೆ.

  ವಿಪ್ರಬಾಂಧವರು ಸಮಾವೇಶಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಬ್ರಾಹ್ಮಣ್ಯದ ಧೀಮಂತಿಕೆಯನ್ನು ಮರಳಿ ಕಟ್ಟುವಲ್ಲಿ ಕೈಜೋಡಿಸುವಂತೆ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಉಪಾಧ್ಯಕ್ಷ ಡಾ.ಶಶಿಭೂಷಣ್ ಹೆಗಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  Share This
  300x250 AD
  300x250 AD
  300x250 AD
  Back to top