ಕುಮಟಾ: ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ ಉತ್ತರಕನ್ನಡ ಜಿಲ್ಲೆಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ಅಭಿಮಾನಿಗಳನ್ನು ಹೊಂದಿದ್ದಾರೆ. ಅವರಿಗೆ ಅಭಿನಂದನೆ ಸಲ್ಲಿಸಲು ಜಿಲ್ಲಾ ಮಟ್ಟದಲ್ಲಿ ಅಭಿನಂದನಾ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಅಭಿನಂದನಾ ಸಮಿತಿ ಅಧ್ಯಕ್ಷ ಮಂಜುನಾಥ ನಾಯ್ಕ ಹೇಳಿದರು. .
ರಾಷ್ಟ್ರಮಟ್ಟದ ನಾಯಕರಾಗಿ ಹೊರಹೊಮ್ಮಿ, ಕರ್ನಾಟಕ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಬಿ.ಕೆ.ಹರಿಪ್ರಸಾದ ಅವರಿಗೆ ಮೇ 22ರಂದು ಬೆಳಿಗ್ಗೆ 11.30ಕ್ಕೆ ಪಟ್ಟಣದ ಗಿಬ್ ಹೈಸ್ಕೂಲ್ ಸಮೀಪದ ಲಕ್ಷ್ಮೀಬಾಯಿ ಸಭಾಭವನದಲ್ಲಿ ಅಭಿನಂದನಾ ಸಮಾರಂಭ ಆಯೋಜಿಸಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಕಲಾ ತಂಡದಿಂದ ಬಿ.ಕೆ.ಹರಿಪ್ರಸಾದ ಅವರನ್ನು ಸ್ವಾಗತಿಸಲಾಗುತ್ತದೆ. ಮಾಜಿ ಸಚಿವ ಮತ್ತು ಹಾಲಿ ಶಾಸಕ ಆರ್.ವಿ.ದೇಶಪಾಂಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ವಿಶೇಷ ಅಭ್ಯಾಗತರಾಗಿ ಮಾಜಿ ಸಚಿವ ಸಂತೋಷ ಲಾಡ್, ಮಾಜಿ ಶಾಸಕಿ ಶಾರದಾ ಶೆಟ್ಟಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ನಾಯ್ಕ, ಮಾಜಿ ಶಾಸಕರಾದ ಮಂಕಾಳ ವೈದ್ಯ, ಸತೀಶ ಸೈಲ್, ಜೆ.ಡಿ.ನಾಯ್ಕ, ಕೆ.ಎಚ್.ಗೌಡ, ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಎಲ್.ಘೋಟ್ನೇಕರ, ಮಾಜಿ ಸಚಿವ ಆರ್.ಎನ್.ನಾಯ್ಕ, ಕೆಪಿಸಿಸಿ ಸದಸ್ಯ ಪ್ರಶಾಂತ ದೇಶಪಾಂಡೆ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ನಿವೇದಿತ ಆಳ್ವಾ, ರಮಾನಂದ ನಾಯಕ, ಸುಷ್ಮಾ ರಾಜಗೋಪಾಲ ರೆಡ್ಡಿ, ಗಜಾನನ ತಾರೀಸ್ಕರ ಪಾಲ್ಗೊಳ್ಳಲಿದ್ದಾರೆ ಎಂದರು.
ಮುಖ್ಯ ಅತಿಥಿಗಳಾಗಿ ಕಾಂಗ್ರೆಸ್ ಕಿಸಾನ್ ಸೆಲ್ ಅಧ್ಯಕ್ಷ ಶಿವಾನಂದ ಹೆಗಡೆ, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಎನ್.ಸುಬ್ರಹ್ಮಣ್ಯ, ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷ ನಾಗರಾಜ ನಾರ್ವೇಕರ, ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಅಬ್ದುಲ್ ಮಜೀದ್, ಉದ್ಯಮಿ ಯಶೋಧರ ನಾಯ್ಕ, ಗೌರವಾಧ್ಯಕ್ಷ ಆರ್.ಜಿ.ನಾಯ್ಕ, ಜಿ.ಪಂ ಮಾಜಿ ಉಪಾಧ್ಯಕ್ಷ ರಾಮ ಮೊಗೇರ, ಕಾಂಗ್ರೆಸ್ ಸೇವಾದಳದ ಜಿಲ್ಲಾಧ್ಯಕ್ಷ ಆರ್.ಎಚ್.ನಾಯ್ಕ, ಕಾಂಗ್ರೆಸ್ ಸೇವಾದಲದ ಹೆಚ್ಚುವರಿ ಅಧ್ಯಕ್ಷ ಸಾಯಿ ಗಾಂವಕರ ಪಾಲ್ಗೊಳ್ಳಲಿದ್ದಾರೆ. ಇನ್ನುಳಿದಂತೆ ಜಿ.ಪಂ ಮಾಜಿ ಸದಸ್ಯರು, ವಿವಿಧ ತಾಲೂಕಿನ ಬ್ಲಾಕ್ ಅಧ್ಯಕ್ಷರು, ಯುವ ಕಾಂಗ್ರೆಸ್ ಅಧ್ಯಕ್ಷರು ಸೇರಿದಂತೆ ಮತ್ತಿರರ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದರು.
ಸಮಿತಿಯ ಸಂಚಾಲಕ ಶಿವಾನಂದ ಹೆಗಡೆ ಕಡತೋಕಾ ಮಾತನಾಡಿ, ಹರಿಪ್ರಸಾದ ಅಭಿಮಾನಿಗಳು ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಅವರು ಜಿಲ್ಲೆಯ ಬಗ್ಗೆ ಅಪಾರ ಅಭಿಮಾನ ಹೊಂದಿದ್ದು, ಹಲವಾರು ರಾಜ್ಯಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ತಂದ ಗೌರವ ಅವರಿಗೆ ಸಲ್ಲುತ್ತದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಸಮಿತಿಯ ಗೌರವಧ್ಯಕ್ಷ ಆರ್.ಜಿ.ನಾಯ್ಕ, ಕಾರ್ಯಾಧ್ಯಕ್ಷ ಲೋಹಿತ್ ನಾಯ್ಕ, ಹೊನ್ನಾವರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ನಾಯ್ಕ, ಯುವ ಘಟಕದ ಅಧ್ಯಕ್ಷ ಸಂದೇಶ ಶೆಟ್ಟಿ, ಪ್ರಮುಖರಾದ ಸಚಿನ ನಾಯ್ಕ, ಜೈವಂತ ಪಟಗಾರ, ನಾಗೇಶ ಪಟಗಾರ, ನಾಗರಾಜ ಹರಿಕಂತ್ರ, ಸುಭಾಷ ಮೇಸ್ತ, ದಾಮೋದರ ನಾಯ್ಕ, ಶ್ರೀರಾಮ ಜಾದೂಗಾರ, ವಿನಾಯಕ ಶೇಟ್, ಮೈಕಲ್ ರೋಡ್ರಿಗಸ್ ಸೇರಿದಂತೆ ಮತ್ತಿತರರು ಇದ್ದರು.