ಬೆಂಗಳೂರು: 2022 ನೇ ಸಾಲಿನ SSLC ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ 85.63% ಫಲಿತಾಂಶ ದಾಖಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ ಹೇಳಿದರು.
ಈ ಬಾರಿ ಒಟ್ಟೂ 7,30,881 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಕಳೆದ ಹತ್ತು ವರ್ಷದಲ್ಲಿ ಇದು ದಾಖಲೆಯ ಫಲಿತಾಂಶವಾಗಿದೆ.
145 ವಿದ್ಯಾರ್ಥಿಗಳು 600/600 ಅಂಕ ಪಡೆದಿದ್ದಾರೆ. ಈ ಬಾರಿಯೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ.