
ಶಿರಸಿ: ಮಾರ್ಚ್ 2022 ರಲ್ಲಿ ನಡೆದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲೂಕಿನ ಚಿರಾಗ್ 625ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದು ಜಿಲ್ಲೆಗೆ, ಕಲಿತ ಶಾಲೆಗೆ ಕೀರ್ತಿ ತಂದಿದ್ದಾನೆ. ಈತನು ಶಿರಸಿಯ ಶ್ರೀ ಮಾರಿಕಾಂಬಾ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಯಾಗಿದ್ದಾನೆ. ಜೊತೆಗ್ ತಾಲೂಕಿನ ಬಿಸಾಲಕೊಪ್ಪ ಸೂರ್ಯನಾರಾಯಣ ಪ್ರೌಢಶಾಲೆಯ ಕನ್ನಿಕಾ ಪರಮೇಶ್ವರಿ ರಾಮಚಂದ್ರ ಹೆಗಡೆ, ಬಿಸಲಕೊಪ್ಪ, ಶಿರಸಿಯ ಸೆಂಟ್ ಅಂಟೋನಿ ಶಾಲೆಯ ಶರ್ಮಿನ ಶೇಖ್ ಸಹ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ಇವರ ಸಾಧನೆಗೆ ಶಾಲಾ ಶಿಕ್ಷಕರು, ಆಡಳಿತ ಮಂಡಳಿ ಹಾಗು ಪೋಷಕರು ಹರ್ಷವ್ಯಕ್ತಪಡಿಸಿದ್ದಾರೆ.