ಸಿದ್ದಾಪುರ: 2021-22ನೇ ಸಾಲಿನ ಎಸ್ ಎಸ್ ಎಲ್ ಸಿ ಫಲಿತಾಂಶ ಇಂದು ಪ್ರಕಟವಾಗಿದ್ದು, ತಾಲೂಕಿನ ಸರಕುಳಿಯ ಶ್ರೀ ಜಗದಂಬಾ ಪ್ರೌಢಶಾಲೆಯದ್ದು 96.87% ಫಲಿತಾಂಶ ದಾಖಲಾಗಿದೆ. ಪರೀಕ್ಷೆಗೆ ಕುಳಿತ 32 ವಿದ್ಯಾರ್ಥಿಗಳ ಪೈಕಿ 31 ವಿದ್ಯಾರ್ಥಿಗಳು ಪಾಸಾಗಿದ್ದು, ಅವರಲ್ಲಿ 19 ವಿದ್ಯಾರ್ಥಿಗಳು 85%ಕ್ಕಿಂತ ಅಧಿಕ ಅಂಕ ಪಡೆದಿದ್ದಾರೆ. ಈ ಪೈಕಿ 14 ವಿದ್ಯಾರ್ಥಿಗಳು 90%ಕ್ಕಿಂತ ಹೆಚ್ಚಿನ ಅಂಕ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ.
ಭೂಮಿಕಾ ಹೆಗಡೆ 625ಕ್ಕೆ 622 ಅಂಕಗಳೊಂದಿಗೆ ಶಾಲೆಗೆ ಪ್ರಥಮ, ರಾಜ್ಯಕ್ಕೆ ನಾಲ್ಕನೇ ಸ್ಥಾನ ಪಡೆದಿದ್ದು, ಸಹನಾ ಹೆಗಡೆ ಹಾಗೂ ರಾಕೇಶ ಗೌಡ 620 ಅಂಕಗಳೊಂದಿಗೆ ದ್ವಿತೀಯ ಮತ್ತು ನಾಗರಾಜ ಹೆಗಡೆ 619 ಅಂಕ ಪಡೆದು ಮೂರನೇ ಸ್ಥಾನ ಪಡೆದಿದ್ದಾನೆ.
ವಿದ್ಯಾರ್ಥಿಗಳ ಈ ಸಾಧನೆಗೆ ಎಲ್ಲೆಡೆಯೂ ಮೆಚ್ಚುಗೆ ವ್ಯಕ್ತವಾಗಿದ್ದು, ಸಾಧನೆ ತೋರಿದ ಎಲ್ಲಾ ವಿದ್ಯಾರ್ಥಿಗಳನ್ನು ಶಾಲೆಯ ಶಿಕ್ಷಕರು, ಆಡಳಿತ ಮಂಡಳಿ ಹಾಗು ಪಾಲಕರು ಅಭಿನಂದಿಸಿದ್ದಾರೆ.Attachments area