ಕಾರವಾರ: ಬೆಂಗಳೂರು ಮಕ್ಕಳ ರಕ್ಷಣಾ ನಿರ್ದೇಶನಾಲಯ, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಜಿಲ್ಲಾಡಳಿತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ವತಿಯಿಂದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮೇ 20ರಂದು ಹಮ್ಮಿಕೊಂಡಿದ್ದ ಉಚಿತ ಮಕ್ಕಳ ರಕ್ಷಣಾ ಸಹಾಯವಾಣಿ 1098 ಮತ್ತು ಉಚಿತ ಟೆಲಿ ಆಪ್ತ ಸಮಾಲೋಚನೆ ಟೋಲ್ ಫ್ರೀ ಸಂಖ್ಯೆ 14499 ಹಾಗೂ ಕಾನೂನು ಬದ್ಧ ದತ್ತಕ ಪಡೆಯಲು ಪ್ರೋತ್ಸಾಹಿಸುವ ವಿಷಯ ಮತ್ತು ಮಕ್ಕಳ ಸಂರಕ್ಷಣೆ ವಿಷಯಗಳ ಕುರಿತ ಪೋಸ್ಟರ್ ಗಳನ್ನು ಆಟೋಗಳ ಹಿಂಭಾಗದಲ್ಲಿ ಅಂಟಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಮುಲೈ ಮುಗಿಲನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಪ್ರಿಯಾಂಗಾ ಎಮ್, ಡಿವೈಎಸ್‍ಪಿ ವ್ಯಾಲೆಂಟೈನ್ ಡಿಸೋಜಾ, ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಶ್ರೀ ಕಾಂತ ಕುರಣೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಶ್ಯಾಮಲಾ ಸಿ.ಕೆ., ಇನ್ನಿತರ ಅಧಿಕಾರಿ ಮತ್ತು ಸಿಬ್ಬಂದಿ ಇದ್ದರು.