ಕಾರವಾರ: ಈ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶದಲ್ಲಿ 600 ಅಂಕಗಳಿಗಿಂತ ಹೆಚ್ಚು ಅಂಕ ಪಡೆದಿರುವ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಮಕ್ಕಳ ಉನ್ನತ ಶಿಕ್ಷಣಕ್ಕೆ ನೂತನ ಯೋಜನೆ ರೂಪಿಸುವ ಹಾಗೂ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯು ನೋಂದಣಿ ಪ್ರಕ್ರಿಯೆ ಪ್ರಾರಂಭಿಸಿದೆ ಎಂದು ರಾಜ್ಯ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ತಕ್ಷಣವೇ ನೋಂದಾಯಿತ ಕಾರ್ಮಿಕರು ತಮ್ಮ ಹತ್ತಿರದ ಕಾರ್ಮಿಕ ಕಲ್ಯಾಣ ಕಚೇರಿಗೆ ಭೇಟಿ ನೀಡಿ ಸೂಕ್ತ ದಾಖಲೆಗಳನ್ನು ನೀಡುವ ಮೂಲಕವಾಗಿ ನೋಂದಾಯಿಸಿಕೊಳ್ಳಲು ವಿನಂತಿಸಿಕೊಂಡಿದ್ದಾರೆ.