ಸಿದ್ದಾಪುರ: ಶ್ರೀ ಕೋಡಿಗದ್ದೆ ಯಕ್ಷಗಾನ ಕಲಾ ಸಂಘ (ರಿ) ದೊಡ್ಮನೆ ಮತ್ತು ಶ್ರೀ ವೀರಭದ್ರ ಸಹಿತ ಗೌರಿಶಂಕರ ದೇವಾಲಯ ಐಸೂರು ಭಕ್ತರ ಸಂಯುಕ್ತ ಆಶ್ರಯದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಬೆಂಗಳೂರು ಇವರ ಸಹಕಾರದಲ್ಲಿ ಮೇ 21ರ ರಾತ್ರಿ 8ಗಂಟೆಯಿಂದ ಐಸೂರಿನ ಶ್ರೀವೀರಭದ್ರೇಶ್ವರ ದೇವಾಲಯ ಆವಾರದಲ್ಲಿ ಸನ್ಮಾನ ಕಾರ್ಯಕ್ರಮ ಮತ್ತು ಯಕ್ಷಗಾನ ಬಯಲಾಟವನ್ನು ಆಯೋಜಿಸಲಾಗಿದೆ.
ಕಾರ್ಯಕ್ರಮವನ್ನು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ಜಿ.ಎಲ್.ಹೆಗಡೆ, ಉದ್ಘಾಟಿಸಲಿದ್ದು. ಶಿಕ್ಷಕರ ಗೃಹ ನಿರ್ಮಾಣ ಸಹಕಾರಿ ಸಂಘ ನಿ., ಶಿವಮೊಗ್ಗ ಇದರ ಅಧ್ಯಕ್ಷ ಎಂ.ಡಿ.ಹೆಗಡೆ ಕುಡೇಗೋಡ ಅಧ್ಯಕ್ಷತೆ ವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಕರ್ನಾಟಕ ಉಚ್ಛ ನ್ಯಾಯಾಲಯದ ವಕೀಲರಾದ ಜಿ.ಎನ್.ಹೆಗಡೆ ತಲೇಕೇರಿ ಇವರನ್ನು ಸನ್ಮಾನಿಸಲಾಗುವುದು. ಕಾರ್ಯಕ್ರಮದಲ್ಲಿ ಕೆ.ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕ ರಾಘವೇಂದ್ರ ಶಾಸ್ತ್ರಿ ಕೋಟೆಗದ್ದೆ ಹಾಗೂ ಸಾಮಾಜಿಕ ಕಾರ್ಯಕರ್ತರಾದ ಶಾಂತಕುಮಾರ ಭಟ್ಟ ಕಲಕೈ ಇವರು ಅತಿಥಿಗಳಾಗಿ ಪಾಲ್ಗೊಳ್ಳಲಿದ್ದು, 9 ಗಂಟೆಯಿಂದ ಖ್ಯಾತ ಕಲಾವಿದರಿಂದ ‘ರಾವಣ ವಧೆ’ ಯಕ್ಷಗಾನ ಬಯಲಾಟವನ್ನು ಆಯೋಜಿಸಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.