ಯಲ್ಲಾಪುರ; ತಾಲೂಕಿನ ಹಿತ್ಲಳ್ಳಿ ಗ್ರಾಮ ಪಂಚಾಯತ ವ್ಯಾಪ್ತಿಯ ಗ್ರಾಮಸ್ಥರ ಬಹುಕಾಲದ ಬೇಡಿಕೆಯಾದ ಸೇತುವೆ ಹಾಗೂ ಸಿ.ಸಿ. ರಸ್ತೆ ನಿರ್ಮಾಣಕ್ಕೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್ ಇಲಾಖೆ ಮೂಲಕವಾಗಿ 5 ಕೋಟಿ ರೂಪಾಯಿ ವಿಶೇಷ ಅನುದಾನವು ಮಂಜೂರಾಗಿದೆ.
ನಮ್ಮ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿ ಗ್ರಾಮಸ್ಥರ ಆಶೋತ್ತರಗಳಿಗೆ ಧ್ವನಿಯಾಗಿ ಶೀಘ್ರವೇ ವಿಶೇಷ ಅನುದಾನವನ್ನು ಮಂಜೂರಿ ಮಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಹಾಗೂ ಸಹಕರಿಸಿದ ವಿಧಾನಪರಿಷತ ಸದಸ್ಯಶಾಂತಾರಾಮ ಸಿದ್ದಿ ಅವರಿಗೆ ಹಿತ್ತಳ್ಳಿ ಭಾಗದ ಗ್ರಾಮಸ್ಥರ ಪರವಾಗಿ ಹಾರ್ದಿಕ ಅಭಿನಂದನೆಗಳು ಎಂದು ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.