ಕಾರವಾರ: ಲಾರಿಯೊಂದು ಡಿಕ್ಕಿ ಹೊಡೆದು ಸ್ಕೂಟರ್‌ನಲ್ಲಿ ತೆರಳುತ್ತಿದ್ದ ವೃದ್ಧೆಯೊಬ್ಬರು ರಸ್ತೆಗೆ ಬಿದ್ದು ಸ್ಥಳದಲ್ಲೇ ಮೃತಪಟ್ಟ ಘಟನೆ ಕಾರವಾರದ ಹಬ್ಬುವಾಡ ಗೋಲ್ಡನ್ ಬೇಕರಿ ಬಳಿ ನಡೆದಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ ಕಾರವಾರ ತಾಲೂಕಿನ ಕಿನ್ನರದ 63 ವರ್ಷದ ಸುನಿತಾ ರಾಣೆ ಎನ್ನುವವರಿಗೆ ಲಾರಿಯೊಂದು ಡಿಕ್ಕಿಯಾಗಿದೆ. ಲಾರಿ ಡಿಕ್ಕಿಯಾದ ರಭಸಕ್ಕೆ ವೃದ್ಧೆ ರಸ್ತೆಗೆ ಬಿದ್ದಿದ್ದು, ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾರೆ.
ಘಟನೆಗೆ ಸಂಬoಧಿಸಿದoತೆ ಲಾರಿ ಚಾಲಕನ ವಿರುದ್ಧ ದೂರು ದಾಖಲಾಗಿದ್ದು, ಕಾರವಾರ ಸಂಚಾರ ಠಾಣೆಯ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.