ಮುಂಡಗೋಡ: ತಾಲೂಕಿನ ಹುನಗುಂದದ ವಿರಕ್ತ ಮಠದ ಸಭಾಂಗಣದಲ್ಲಿ ಮೇ 27 ರಂದು ಮಾನ್ಯ ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಇಂದು ಪಕ್ಷದ ಪದಾಧಿಕಾರಿಗಳು ಹಾಗೂ ಸ್ಥಳೀಯ ಮುಖಂಡರ ಜೊತೆಗೂಡಿ ಹುನಗುಂದ ಶಕ್ತಿ ಕೇಂದ್ರದ ವ್ಯಾಪ್ತಿಯ ಕಾರ್ಯಕರ್ತರ ಸಭೆ ನಡೆಸಿದರು.
ಹುನಗುಂದ ಗ್ರಾಮದ ಸರ್ವಾಂಗೀಣ ಅಭಿವೃದ್ಧಿಗಾಗಿ ಕೈಗೊಳ್ಳಬೇಕಾಗಿರುವ ಅಭಿವೃದ್ಧಿ ಯೋಜನೆಗಳ ಕುರಿತು ಕಾರ್ಯಕರ್ತರೊಂದಿಗೆ ಚರ್ಚಿಸಿ, ಕಾರ್ಯಕರ್ತರ ಅಹವಾಲನ್ನು ಸ್ವೀಕರಿಸಿ ಪಕ್ಷದ ಬಲವರ್ಧನೆಗಾಗಿ ಕಾರ್ಯಕರ್ತರಿಗೆ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.
ಈ ಸಂದರ್ಭದಲ್ಲಿ ಯುವ ನಾಯಕರಾದ ವಿವೇಕ್ ಹೆಬ್ಬಾರ್, ಜಿಲ್ಲಾ ಪಂಚಾಯತ ಮಾಜಿ ಸದಸ್ಯರಾದ ರವಿಗೌಡ ಪಾಟೀಲ್, ಎಲ್.ಟಿ.ಪಾಟೀಲ್, ಪ್ರಧಾನ ಕಾರ್ಯದರ್ಶಿ ಮಂಜುನಾಥ ಪಾಟೀಲ್, ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಕೆ.ಸಿ.ಗಲಭಿ ಪ್ರಮುಖರಾದ ಗುಡ್ಡಪ್ಪ ಕಾತೂರ, ಅಶೋಕ ಛಲವಾದಿ, ಬೂತ್ ಅಧ್ಯಕ್ಷರು, ಗ್ರಾಮ ಪಂಚಾಯತ ಸದಸ್ಯರು, ಕಾರ್ಯಕರ್ತರು ಉಪಸ್ಥಿತರಿದ್ದರು.