ಬೆಂಗಳೂರು: ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ವಂದಿತಾ ಶರ್ಮಾ ಅವರನ್ನು ನೇಮಕ ಮಾಡಲಾಗಿದೆ. ಹಾಲಿ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಮೇ 31 ರಂದು ನಿವೃತ್ತರಾದ ಬಳಿಕ ತೆರವಾಗುವ ಸ್ಥಾನಕ್ಕೆ ವಂದಿತಾ ಶರ್ಮಾ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
1986ರ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿರುವ ವಂದಿತಾ ಶರ್ಮಾ ಪ್ರಸ್ತುತ ರಾಜ್ಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತಾಗಿದ್ದಾರೆ. ಕಳೆದ 35 ವರ್ಷಗಳಿಂದ ವಿವಿಧ ಜವಾಬ್ದಾರಿಗಳನ್ನು ಅವರು ನಿಭಾಯಿಸಿದ್ದಾರೆ.ಮುಖ್ಯ ಕಾರ್ಯದರ್ಶಿಯಾಗಿ ನೇಮಕವಾಗಿರುವ ಅವರ ಅಧಿಕಾವಧಿ ಮುಂದಿನ ವರ್ಷ ನವೆಂಬರ್‌ವರೆಗೆ ಇರಲಿದೆ.
ಕರ್ನಾಟಕದ ಮೊದಲ ಮಹಿಳಾ ಮುಖ್ಯ ಕಾರ್ಯದರ್ಶಿಯಾಗಿ 2000 ನೇ ಇಸವಿಯಲ್ಲಿ ತೆರೇಸಾ ಭಟ್ಟಾಚಾರ್ಯ ನೇಮಕಗೊಂಡಿದ್ದರು. ಬಳಿಕ 2006 ರಲ್ಲಿ ಡಾ.ಮಾಲತಿ ದಾಸ್, 2017ರಲ್ಲಿ ಕೆ ರತ್ನಪ್ರಭಾ ಹುದ್ದೆ ಅಲಂಕರಿಸಿದ್ದರು. ಇದೀಗ ನಾಲ್ಕನೇ ಮಹಿಳಾ ಮುಖ್ಯ ಕಾರ್ಯದರ್ಶಿಯಾಗಿ ವಂದಿತಾ ಶರ್ಮ ನೇಮಕಗೊಂಡಿದ್ದಾರೆ